Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಯೋಜನೆ: ತನ್ನ ಹಕ್ಕನ್ನಷ್ಟೇ...

ಮೇಕೆದಾಟು ಯೋಜನೆ: ತನ್ನ ಹಕ್ಕನ್ನಷ್ಟೇ ರಾಜ್ಯ ಪ್ರತಿಪಾದಿಸುತ್ತಿದೆ; ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ13 Aug 2021 6:13 PM IST
share
ಮೇಕೆದಾಟು ಯೋಜನೆ: ತನ್ನ ಹಕ್ಕನ್ನಷ್ಟೇ ರಾಜ್ಯ ಪ್ರತಿಪಾದಿಸುತ್ತಿದೆ; ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಆ. 13: `ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರದಲ್ಲಿ ಕರ್ನಾಟಕ ರಾಜ್ಯವು ತನ್ನ ಹಕ್ಕನ್ನು ಮಾತ್ರ ಪ್ರತಿಪಾದಿಸುತ್ತಿದೆ. ನೆರೆ ರಾಜ್ಯದ ಒಂದು ಹನಿ ನೀರೂ ನಮಗೆ ಬೇಕಿಲ್ಲ' ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.'

ಶುಕ್ರವಾರ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ನ್ಯಾಯ ಸಮ್ಮತವಾಗಿ ಹಾಗೂ ಕಾನೂನಾತ್ಮಕವಾಗಿ ನಮಗೆ ಹಂಚಿಕೆಯಾಗಿರುವ ನೀರನ್ನು ಮಾತ್ರ ನಾವು ಕೇಳುತ್ತಿದ್ದೇವೆ ಹಾಗೂ ಅದನ್ನು ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. 

`ಮೇಕೆದಾಟು ಅಣೆಕಟ್ಟು ಯೋಜನೆಯ ಬಗ್ಗೆ ರಾಜ್ಯ ಸರಕಾರಕ್ಕೆ ಸ್ಪಷ್ಟತೆ ಇದೆ. ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ. ಈ ಯೋಜನೆ ಬಗ್ಗೆ ಉಪೇಕ್ಷೆ ಮಾಡುವ ಪ್ರಶ್ನೆಯೂ ಇಲ್ಲ, ರಾಜಿ ಮಾತಂತೂ ಇಲ್ಲವೇ ಇಲ್ಲ' ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರ ನೀಡಿದ ಅಭಿಪ್ರಾಯವನ್ನೇ ತಮಿಳುನಾಡು ತನಗೆ ಬೇಕಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದೆ. ಕಾನೂನು ಎಂಬುದು ಎಲ್ಲರಿಗೂ ಒಂದೇ. ನ್ಯಾಯ ಸಮ್ಮತವಾಗಿಯೇ ಈ ಯೋಜನೆ ಆಗುತ್ತಿದೆ. ನ್ಯಾಯಾಧೀಕರಣ ಹೇಳಿದ್ದನ್ನೇ ನಾವು ಕೇಳುತ್ತಿದ್ದೇವೆ. ಮೇಕೆದಾಟು ಯೋಜನೆ ಯಾವ ಕಾರಣಕ್ಕೂ ನಿಲ್ಲದು ಎಂದು ಅವರು ನುಡಿದರು. 

ಇದೇ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮೇಕೆದಾಟು ವಿಚಾರದಲ್ಲಿ ನಮಗೆ ದೇಶವೇ ಮುಖ್ಯ ಎಂದು ಹೇಳಿರುವ ಬಗ್ಗೆ ಗಮನ ಸೆಳೆದಾಗ, ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಆದರೆ, ಮೇಕೆದಾಟು ಯೋಜನೆ ಬಗ್ಗೆ ರಾಜ್ಯದ ನಿಲುವು ಬದಲಾಗುವ ಪ್ರಶ್ನೆಯೇ ಇಲ್ಲ ಎಂದರು ಅಶ್ವತ್ಥನಾರಾಯಣ.

ರಂಪ ಮಾಡುವುದು ಒಳ್ಳೆಯದಲ್ಲ

`ಎಲ್ಲರಿಗೂ ರಾಜಕೀಯ ಸ್ಥಾನಮಾನ, ಸಚಿವ ಸ್ಥಾನ ಬೇಕೆಂಬ ಬಯಕೆ ಇರುವುದು ಸಹಜ. ಆದರೆ, ಆ ಎಲ್ಲ ಪ್ರಯತ್ನಗಳನ್ನು ಬಹಿರಂಗವಾಗಿ ಮಾಡದೇ ನಾಲ್ಕು ಗೋಡೆಗಳ ಮಧ್ಯೆ ಕೂತು ಪಕ್ಷದ ಚೌಕಟ್ಟಿನಲ್ಲಿ ನಡೆಸಬೇಕು. ಮಾಧ್ಯಮಗಳ ಮುಂದೆ ಹೋಗಿ ರಂಪ ಮಾಡುವುದು ಒಳ್ಳೆಯದಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಅದಕ್ಕೊಂದು ನೀತಿ-ಸಿದ್ಧಾಂತ ಇದೆ. ಅದನ್ನು ಎಲ್ಲರೂ ಗೌರವಿಸಬೇಕು ಎಂದ ಅವರು, ಮನೆ ವಿಷಯವನ್ನು ಯಾವ ಕಾರಣಕ್ಕೂ ಬೀದಿಗೊಯ್ಯುವುದು ಸಲ್ಲ.' 

-ಡಾ.ಸಿ.ಎನ್.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X