ಬೆಳೆ ಸಮೀಕ್ಷೆ ವಿವರ ಆ್ಯಪ್‌ನಿಂದ ಅಪ್‌ಲೋಡ್ ಮಾಡಲು ಕರೆ
ಮಂಗಳೂರು, ಆ.13: ತಮ್ಮ ಕ್ಷೇತ್ರಗಳಲ್ಲಿ ಬೆಳೆದ ಬೆಳೆಗಳ ವಿವರವನ್ನು ರೈತರೇ ಸ್ವತಃ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಅಪ್‌ಲೋಡ್ ಮಾಡಲು ಕೃಷಿ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ.
ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಮಾಡಿದಲ್ಲಿ ಈ ಮಾಹಿತಿಯು ಬೆಳೆ ವಿಮೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ಸಾಲ ಪಡೆಯುವ ಸಂದರ್ಭಗಳಲ್ಲಿ ಹಾಗೂ ಇತರ ಪರಿಹಾರಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
ರೈತರು ಕೈಗೊಳ್ಳುವ ಈ ಬೆಳೆ ಸಮೀಕ್ಷೆಯ ವಿವರಗಳು ಪಹಣಿ (RTC)ಗಳಲ್ಲಿ ದಾಖಲಾಗುತ್ತದೆ. ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





