Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಲು ನಾಗರಕ್ಕೆ, ಹುತ್ತಕ್ಕೆ ಹಾಲನ್ನು...

ಕಲ್ಲು ನಾಗರಕ್ಕೆ, ಹುತ್ತಕ್ಕೆ ಹಾಲನ್ನು ಹಾಕದೆ ಮಕ್ಕಳು, ಬಡವರು ಮತ್ತು ರೋಗಿಗಳಿಗೆ ನೀಡಿ: ಶ್ರೀ ಬಸವಪ್ರಭು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ13 Aug 2021 9:21 PM IST
share
ಕಲ್ಲು ನಾಗರಕ್ಕೆ, ಹುತ್ತಕ್ಕೆ ಹಾಲನ್ನು ಹಾಕದೆ ಮಕ್ಕಳು, ಬಡವರು ಮತ್ತು ರೋಗಿಗಳಿಗೆ ನೀಡಿ: ಶ್ರೀ ಬಸವಪ್ರಭು ಸ್ವಾಮೀಜಿ

ದಾವಣಗೆರೆ, ಆ. 13, :ಹಬ್ಬಗಳ ಹೆಸರಿನಲ್ಲಿ ಹಾಲು ಅಮೃತ ಹಬ್ಬಗಳ ಆಚರಣೆ ಹೆಸರಿನಲ್ಲಿ ಕಲ್ಲ ನಾಗರಕ್ಕೆ, ಹುತ್ತಕ್ಕೆ ಹಾಲನ್ನು ಹಾಕದೇ ಮನೆಯಲ್ಲಿ  ಹಿರಿಯರಿಗೆ, ಮಕ್ಕಳಿಗೆ, ಬಡವರಿಗೆ, ರೋಗಿಗಳಿಗೆ ನೀಡುವಂತೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದ್ದಾರೆ.  

ನಗರದ ವಿರಕ್ತಮಠದಲ್ಲಿ ನಾಗರ ಪಂಚಮಿ ಹಬ್ಬದ ಅಂಗವಾಗಿ ಶುಕ್ರವಾರ ಬಸವ ಕೇಂದ್ರ, ಮುರುಘರಾಜೇಂದ್ರ ವಿರಕ್ತಮಠ, ಶಿವಯೋಗಾಶ್ರಮದ ಸಹಯೋಗದಲ್ಲಿ ನಡೆದ ಹಾಲುಕುಡಿಸುವ ಹಬ್ಬ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೂಢನಂಬಿಕೆಗಳನ್ನು ತೊಡೆದು ಹಾಕುವ ಮೂಲಕ ವೈಜ್ಞಾನಿಕವಾಗಿ ಹಾಗೂ ವೈಚಾರಿಕವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದರು. 

ನಾಗರ ಪಂಚಮಿ ಹಬ್ಬದಲ್ಲಿ ಕಲ್ಲು ನಾಗರಕ್ಕೆ ಹಾಲನ್ನು ಎರೆಯುವ ಮೂಲಕ ಕುಡಿಯುವ ಹಾಲನ್ನು ಮಣ್ಣು ಪಾಲು ಮಾಡುತ್ತಾರೆ. ಹಾಲು ಅಮೃತ ಸಮಾನ ಹಾಗೂ ಸಂಜೀವಿನಿಯಾಗಿದ್ದು ಅದು ವಿಟಮಿನ್ ನೀಡುತ್ತದೆ. ದೇವರು ಧರ್ಮದ ಹೆಸರಿನಲ್ಲಿ ಹೋಮ, ಹವನದ ಸಂದರ್ಭದಲ್ಲಿ ಹಾಲು, ತುಪ್ಪ, ಜೇನುತುಪ್ಪ, ಬೆಲ್ಲ, ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ವ್ಯರ್ಥಮಾಡಬಾರದು ಎಂದರು. 

ನಾಗರ ಪಂಚಮಿ ಹಬ್ಬ ಆಚರಿಸಬೇಕೆ ಉಂಡಿ, ಹಣ್ಣುಗಳನ್ನು ತಿನ್ನಿರಿ, ಜೋಕಾಲಿ ಆಡಿರಿ ಎಂದ ಅವರು, ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕ ಸತ್ಯವಾಗಿದೆ. ನಮ್ಮ ದೇಶದಲ್ಲಿ ಬಹಳಷ್ಟು ಜನರಿಗೆ ಕುಡಿಯಲು ಹಾಲು ಸಿಗುತ್ತಿಲ್ಲ. ಬಹಳಷ್ಟು ಮಕ್ಕಳು ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳು ವಯೋವೃದ್ಧರು, ರೋಗಿಗಳಿಗೆ, ಬಡವರಿಗೆ, ನಿರ್ಗತಿಕರಿಗೆ ಹಾಲನ್ನು ನೀಡಬೇಕು ಈ ಮೂಲಕ ಮಾನನವರಲ್ಲಿ ನಿಜವಾದ ದೇವರನ್ನು ಕಾಣಬೇಕು ಎಂದು ಸಲಹೆ ನೀಡಿದರು.

ಹಾವುಗಳು ಹಾಲನ್ನು ಕೊಡುವುದಿಲ್ಲ, ಹಾವಿನ ಆಹಾರ ಇಲಿ, ಹುಳ ಹುಪ್ಪಡಿಗಳು. ಹಾವುಗಳು ಎಂದಿಗೂ ಹಾಲನ್ನು ಕುಡಿಯುವುದಿಲ್ಲ. ಹಾಲನ್ನು ಕುಡಿಯುವುದರಿಂದ ಮೂಳೆಗಳು ಸದೃಢವಾಗುತ್ತವೆ ಹಾಗೂ ಆಯುಷ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ ಜನರು ದುಶ್ಚಟಗಳಿಗೆ ಒಳಗಾಗಿ ಆಲ್ಕೋಹಾಲ್ ಸೇವಿಸುವ ಮೂಲಕ ತಮ್ಮ ಆಯುಷ್ಯವನ್ನು ಕ್ಷೀಣಿಸಿಕೊಳ್ಳುತ್ತಿದ್ದಾರೆ.  ಮಕ್ಕಳಲ್ಲಿ ಜಾಗೃತಿ ಮೂಡಿಸುವುದರಿಂದ ಅವರಲ್ಲಿಯೂ ಸಹಾ ಹಾಲನ್ನು ವ್ಯರ್ಥ ಮಾಡಬಾರದು ಎಂಬ ಅರಿವು ಮೂಡುತ್ತದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗದ ಡಾ.ಮುರುಘಾ ಶರಣರ ಮಾರ್ಗದರ್ಶನದಂತೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು 750ಕ್ಕೂ ಹೆಚ್ಚು ಬಸವ ಕೇಂದ್ರಗಳು ನಾಡಿನಾಧ್ಯಂತ ಆಚರಿಸುತ್ತಾ ಬಂದಿವೆ ಎಂದು ಹೇಳಿದರು. 

ಹಾಸಬಾವಿ ಕರಿಬಸಪ್ಪ, ವಿವಿಎಫ್ ಸಂಘದ ಕಾರ್ಯದರ್ಶಿ ಎಂ.ಜಯಕುಮಾರ, ಟ್ರಸ್ಟ್ ಕಾರ್ಯದರ್ಶಿ ಎಸ್.ಓಂಕಾರಪ್ಪ, ಲಂಬಿ ಮುರುಗೇಶ, ಮಹಿಳಾ ಬಸವ ಕೇಂದ್ರದ ಮಹದೇವಮ್ಮ, ಎಸ್.ಜೆ.ಎಂ.ಶಾಲೆ ಮುಖ್ಯೋಪಾಧ್ಯಾಯ ರೋಷನ್, ಪಾರೂಕ್, ಜಗದೀಶ, ಶಿಕ್ಷಕರಾದ ಸೌಭಾಗ್ಯ, ಕುಮಾರಸ್ವಾಮಿ, ಶರಣಬಸವ ಇತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X