Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಉತ್ಪಾದಕರ ಸಂಸ್ಥೆಗೆ...

ರೈತರ ಉತ್ಪಾದಕರ ಸಂಸ್ಥೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Aug 2021 10:25 PM IST
share
ರೈತರ ಉತ್ಪಾದಕರ ಸಂಸ್ಥೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ

ರಾಮನಗರ, ಆ.13: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದಲ್ಲಿರುವ ರೈತರ ಉತ್ಪಾದಕರ ಸಂಸ್ಥೆಯ ಸಂಸ್ಕರಣಾ ಘಟಕಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ರೈತರ ಜತೆ ಸಂವಾದ ನಡೆಸಿದರು.

ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಖರೀದಿಸಿದ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ, ಅವುಗಳನ್ನು ಮಧ್ಯವರ್ತಿಗಳ ಪ್ರಮೇಯವಿಲ್ಲದೆ ಗ್ರಾಹಕರಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದು, ಈ ಪ್ರಯೋಗ ಯಶಸ್ವಿ ಮತ್ತು ಲಾಭದಾಯಕವೂ ಆಗಿದೆ. ಇಲ್ಲಿ ತೆಂಗಿನ ಕಾಯಿ ಸುಲಿದು ಕ್ರಮಬದ್ಧವಾಗಿ ಸಂಸ್ಕರಣೆ ಮಾಡಿ ಬೇರೆಡೆಗೆ ಪೂರೈಸುವ ವಿಧಾನವನ್ನು ಅವರು ಖುದ್ದು ವೀಕ್ಷಣೆ ಮಾಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅಶ್ವತ್ಥನಾರಾಯಣ, “ಈ ಪ್ರದೇಶದಲ್ಲಿ ಮೊದಲಿನಿಂದಲೂ ತೆಂಗು ಬೆಳೆಯನ್ನು ರೈತರು ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಅನೇಕ ದಶಕಗಳಿಂದ ನ್ಯಾಯಸಮ್ಮತ ಬೆಲೆ ಸಿಗದೇ ಕಷ್ಟಕ್ಕೆ ಸಿಲುಕಿದ್ದ ರೈತರು ಸುಲಿದಿರುವ ಒಂದು ಕೆಜಿ ತೆಂಗಿನ ಕಾಯಿಯನ್ನು ಕೇವಲ 25 ರೂ.ಗಳಿಗೆ ಮಾತ್ರ ಮಾರುವಂಥ ಸ್ಥಿತಿ ಇತ್ತು. ಆದರೆ ದಲ್ಲಾಳಿಗಳು ಇದನ್ನೇ ಲಾಭ ಮಾಡಿಕೊಂಡಿದ್ದರು” ಎಂದರು.

ಈಗ ಕೃಷಿ ಕಲ್ಪದಂಥ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿ ತಲೆಎತ್ತಿರುವ ರೈತರ ಉತ್ಪಾದಕರ ಸಂಸ್ಥೆಯು ನೇರವಾಗಿ ರೈತರಿಂದಲೇ ಒಂದು ಕೆಜಿ ತೂಕದ ಸುಲಿದಿರುವ ತೆಂಗಿಗೆ 35 ರೂ.ವರೆಗೂ ಬೆಲೆ ಕೊಟ್ಟು ಖರೀದಿ ಮಾಡುತ್ತಿದೆ. ಅಲ್ಲದೆ, ಇಲ್ಲಿನ ತೆಂಗನ್ನು ಅತ್ಯುತ್ತಮವಾಗಿ ಸಂಸ್ಕರಣೆ ಮಾಡಿ ಆಂಧ್ರ ಪ್ರದೇಶದ ವೈಜಾಕ್ (ವಿಶಾಖಪಟ್ಟಣಂ) ನಗರಕ್ಕೆ ಪೂರೈಕೆ ಮಾಡುತ್ತಿದೆ. ಇಲ್ಲಿಂದ ವಾರಕ್ಕೊಮ್ಮೆ ಒಂದು ಟ್ರಕ್ ತೆಂಗಿನ ಕಾಯಿ ಅಲ್ಲಿಗೆ ಸರಬರಾಜು ಆಗುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ರೈತರು ಮತ್ತು ಬಳಕೆದಾರರ ನಡುವೆ ರೈತರ ಉತ್ಪಾದಕರ ಸಂಸ್ಥೆ ಮೂಲಕ ಉತ್ತಮ ಸಂಪರ್ಕ ಏರ್ಪಟ್ಟಿದ್ದು, ಇದಕ್ಕೆ ಇನ್ನಷ್ಟು ಶಕ್ತಿ ತುಂಬಲಾಗುವುದು. ಸರಕಾರದಿಂದ ಹೆಚ್ಚು ಪ್ರೋತ್ಸಾಹ ಕೊಡಲಾಗುವುದು ಎಂದ ಅವರು, ಈ ವ್ಯವಹಾರದಲ್ಲಿ ರೈತರ ಉತ್ಪಾದಕರ ಸಂಸ್ಥೆಗೆ ತನ್ನ ಖರ್ಚೆಲ್ಲ ಕಳೆದು ಅತ್ಯಲ್ಪ ಪ್ರಮಾಣದ ಲಾಭ ಇರುತ್ತದೆ ಎಂದರು.

ಕೃಷಿ ಕಲ್ಪ ಫೌಂಡೇಶನ್ ಅಧ್ಯಕ್ಷ ಪ್ರಶಾಂತ ಪ್ರಕಾಶ್ ಮಾಡಿರುವ ಸಾಧನೆಯನ್ನು ಕೊಂಡಾಡಿದ ಅವರು, ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕೃಷಿ ಮಾಡದಿದ್ದರೆ ಭವಿಷ್ಯದಲ್ಲಿ ಆಹಾರದ ಅಗತ್ಯವನ್ನು ನೀಗಿಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಕಲ್ಪ ಪ್ರತಿಷ್ಠಾನದ ಅಧ್ಯಕ್ಷ ಪ್ರಶಾಂತ ಪ್ರಕಾಶ್, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಕೃಷಿ ಕಲ್ಪ ಫೌಂಡೇಷನ್ ಸಿಇಒ ಸಿ.ಎಂ.ಪಾಟೀಲ್, ಅರ್ಕಾವತಿ ಎಫ್‍ಪಿಒ ಸಿಇಒ ವಿನುತಾ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X