Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರೀತಿಸಿದ ಯುವತಿ ಜೊತೆ ಕಾರಿನಲ್ಲಿ...

ಪ್ರೀತಿಸಿದ ಯುವತಿ ಜೊತೆ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೈದ ಪ್ರಿಯಕರ

ವಾರ್ತಾಭಾರತಿವಾರ್ತಾಭಾರತಿ14 Aug 2021 10:33 AM IST
share
ಪ್ರೀತಿಸಿದ ಯುವತಿ ಜೊತೆ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೈದ ಪ್ರಿಯಕರ

ಚಾಮರಾಜನಗರ, ಆ.14: ಪ್ರೀತಿಸಿದ ಯುವತಿ ತನ್ನನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ ಯುವತಿಯನ್ನು ತನ್ನ ಕಾರಿನಲ್ಲಿ ಕೂರಿಸಿ ಬೆಂಕಿ ಹಚ್ಚಿಕೊಂಡು ತಾನೂ ಸಾವನ್ನಪ್ಪಿ, ಆಕೆಯ ಸಾವಿಗೂ ಕಾರಣನಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ಶುಕ್ರವಾರ ನಡೆದಿರುವುದು ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಶ್ರೀನಿವಾಸ್ (23) ಹಾಗೂ ಅದೇ ಗ್ರಾಮದ ಕಾಂಚನಾ (22) ಮೃತಪಟ್ಟವರು.

ಕಾರಿನ ಒಳಭಾಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಒಳಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಒಂದೇ ಸೀಟಿನಲ್ಲಿ ಇಬ್ಬರ ತಲೆಬುರುಡೆಗಳು ಮಾತ್ರ ಕಂಡುಬಂದಿವೆ.

ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಕೃಷಿಕರಾಗಿದ್ದ ಶ್ರೀನಿವಾಸ್ ಕ್ಯಾಬ್ ಚಾಲಕರಾಗಿದ್ದರು. ಈ ಹಿಂದೆ ಶಿಕ್ಷಣ ಪಡೆಯುತ್ತಿದ್ದಾಗ ಇಬ್ಬರೂ ಸಹಪಾಠಿಗಳಾಗಿದ್ದರು. ಶ್ರೀನಿವಾಸ್ ಅವರು ಕಾಂಚನಾರನ್ನು ಹಲವು ಸಮಯದಿಂದ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ ಎಂದು ಗೊತ್ತಾಗಿದೆ. ಹಾಗಾಗಿ, ಕಾಂಚನಾ ಕೂಡ ಶ್ರೀನಿವಾಸ್ ಅವರಿಂದ ದೂರ ಇದ್ದರೆನ್ನಲಾಗಿದೆ.

ಇದರಿಂದ ಬೇಸತ್ತಿದ್ದ  ಶ್ರೀನಿವಾಸ್ ಅವರು ಕಾಂಚನಾರನ್ನು ಕಾರಿನಲ್ಲಿ ಕೂರಿಸಿಕೊಂಡು ಮಾಂಬಳ್ಳಿಯಿಂದ ಕಿನಕಳ್ಳಿಗೆ ಹೋಗುವ ಮುಖ್ಯ ರಸ್ತೆಯಿಂದ ಎರಡು ಕಿ.ಮೀ. ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಒಳಗೆ ಕುಳಿತುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆನ್ನಲಾಗಿದೆ. ಪಕ್ಕದ ಜಮೀನಿನಲ್ಲಿ ಹಸು ಮೇಯಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ಕಾರು ಉರಿಯುತ್ತಿದ್ದುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದರು.

ಸ್ಥಳಕ್ಕೆ ಪೊಲೀಸರು ಬಂದಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ಇಣುಕಿ ನೋಡಿದಾಗ ಒಳಗಡೆ ಒಂದೇ ಎರಡು ತಲೆ ಬುರುಡೆಗಳು ಕಂಡು ಬಂದವು. ಕಾರಿನ ಬಾಗಿಲು ಲಾಕ್ ಇತ್ತು.

ಆರಂಭದಲ್ಲಿ ಪ್ರೇಮಿಗಳ ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ, ವಿಚಾರಣೆ ನಡೆಸಿದಾಗ ಶ್ರೀನಿವಾಸ್ ಅವರನ್ನು ಕಾಂಚನಾ ಕುಟುಂಬದವರಿಗೆ ಇಷ್ಟಪಡುತ್ತಿರಲಿಲ್ಲ ಹಾಗಾಗಿ ಕಾಂಚನಾ ಶ್ರೀನಿವಾಸ್ ನಿಂದ ದೂರವಾಗಿದ್ದರು ಎಂಬುದು ಗೊತ್ತಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ವಿಚಾರವಾಗಿ ಮೂರು ತಿಂಗಳ ಹಿಂದೆಯೂ ಶ್ರೀನಿವಾಸ್ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದರು ಎಂದು ಅವರ ಸ್ನೇಹಿತರು  ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X