ಕದ್ರಿ ಶಿವಭಾಗ್: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

ಮಂಗಳೂರು, ಆ.14: ನಗರದ ಶಿವಭಾಗ್‌ನ ನಾಲ್ಕನೇ ಕ್ರಾಸ್‌ನ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿದೆ.
ಶಿವಭಾಗ್ ನಿವಾಸಿ ಹರೀಶ್ಚಂದ್ರ (52) ಮೃತಪಟ್ಟವರು. ಬೆಳಗ್ಗೆ 9 ಗಂಟೆ ಸುಮಾರಿಗೆ ಹರೀಶ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಯಾವುದೋ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಟುಂಬದ ಮೂಲಗಳು ತಿಳಿಸಿವೆ.
ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Next Story





