ಕುಂದಾಪುರ: ಟೆಂಪೋ ಢಿಕ್ಕಿ; ಬೈಕ್ ಸವಾರ ಮೃತ್ಯು
ಸೃಜನ್ ಶೆಟ್ಟಿ
ಕುಂದಾಪುರ : ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ 407 ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story