Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ...

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ14 Aug 2021 6:09 PM IST
share
ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 14: ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಯಿತು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.

ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು.

ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್‍ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ. ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್‍ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್‍ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್‍ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X