ಉಡುಪಿ: ಸ್ವಸಹಾಯ ಗುಂಪಿನ ಸದಸ್ಯರೊಂದಿಗೆ ಪ್ರಧಾನಮಂತ್ರಿ ನೇರ ಸಂವಾದ

ಉಡುಪಿ, ಆ.14: ದೇಶದ 75ನೇ ಸ್ವಾತಂತ್ರೋತ್ಸವ ಆಚರಣೆ ಆಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸ್ವಸಹಾಯ ಗುಂಪುಗಳ ಸದಸ್ಯರೊಂದಿಗೆ ನೇರ ಸಂವಾದ ನಡೆಸಿದರು.
ಈ ನೇರ ಸಂವಾದ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಸಾಮರ್ಥ್ಯ ಸೌಧಗಳಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರುಗಳನ್ನು ಆಹ್ವಾನಿಸಿ ನೇರ ಪ್ರಸಾರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳು ದೇಶದ ವಿವಿಧ ಸ್ವಸಹಾಯ ಗುಂಪು ಗಳ ಮಹಿಳೆಯರೊಂದಿಗೆ ಸಂವಾದ ನಡೆಸಿ, ಮಹಿಳೆಯರು ಆರ್ಥಿಕವಾಗಿ ಇನ್ನಷ್ಟು ಸಶಕ್ತರಾಗಲು ಕರೆ ನೀಡಿದರು. ಸ್ವ-ಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ಹಾಗೂ ಇತರೆ ಅನುದಾನಗಳ ಬಿಡುಗಡೆಗೆ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಮಹಿಳೆ ಯರು ಈ ಸಂವಾದ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಸಮುದಾಯ ಬಂಡವಾಳ ನಿಧಿಯ ಚೆಕ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯನ್ನು ಹಾಡಿ, ರಾಷ್ಟ್ರಗಾನ ವೆಬ್‌ಸೈಟ್‌ಗೆ ಅಪಲೋಡ್ ಮಾಡಲಾುತು ಎಂದು ಜಿಪಂ ಪ್ರಕಟಣೆ ತಿಳಿಸಿದೆ.





