ಉಡುಪಿ; ಎಸೆಸೆಲ್ಸಿ ಪರೀಕ್ಷೆಯ 11 ಟಾಪ್ ವಿದ್ಯಾರ್ಥಿಗಳಿಗೆ ಸನ್ಮಾನ
ಉಡುಪಿ, ಆ.14: ಎಸೆಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸಿದ ಉಡುಪಿ ಜಿಲ್ಲೆಯ 11 ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯ ಕ್ರಮ ಶುಕ್ರವಾರ ಉಡುಪಿ ಜಿಪಂ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಸಿಓ ಡಾ.ನವೀನ್ ಭಟ್ ವೈ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ, ಮೆಡಲ್ ನೀಡಿ ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಜಾಹ್ನವಿ ಸಿ, ಡಿವೈಪಿಸಿ ಪ್ರಭಾಕರ ಮಿತ್ಯಂತ, ಬಿಇಓ ಉಡುಪಿ ನಾಗೇಂದ್ರಪ್ಪ ಎ.ಕೆ., ಬಿಇಓ ಕುಂದಾಪುರ ಎಸ್.ಕೆ.ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.
Next Story