Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ ಸ್ವಾತಂತ್ರ್ಯೋತ್ಸವ ಅಮೃತ...

ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ: ಮುಖ್ಯಮಂತ್ರಿ ಕರೆ

ವಾರ್ತಾಭಾರತಿವಾರ್ತಾಭಾರತಿ14 Aug 2021 9:54 PM IST
share
ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ: ಮುಖ್ಯಮಂತ್ರಿ ಕರೆ

ಬೆಂಗಳೂರು, ಆ.14: ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಕರೆ ನೀಡಿದರು.

ನಗರದ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು, ಸ್ವಾತಂತ್ರ್ಯ ನನ್ನ ಆ ಜನ್ಮ ಸಿದ್ಧ ಹಕ್ಕು ಎಂಬ ಗೋಪಾಲ ಕೃಷ್ಣ ಗೋಖಲೆಯವರ ವೀರೋಚಿತ ಘೋಷಣೆಯೊಂದಿಗೆ ಪ್ರಾರಂಭವಾದ ಭಾರತದ ಸ್ವಾತಂತ್ರ್ಯದ ಹೋರಾಟ ಭಗತ್ ಸಿಂಗ್ ಅವರಂತಹ ಯುವಕರ ಬಲಿದಾನ, ವೀರ ಸಾವರ್ಕರ್ ಅವರಂತಹ ಮಹನೀಯರ ತ್ಯಾಗದ ಮೂಲಕ ಮುಂದಡಿ ಇಟ್ಟಿದ್ದು ಸ್ಮರಣಾರ್ಹ. ಸ್ವಾತಂತ್ರ್ಯ ಚಳುವಳಿಯ ಸಾತ್ವಿಕ ಹೋರಾಟಕ್ಕೆ ಸತ್ಯದ ಮೆರಗು ನೀಡಿದವರು ಮಹಾತ್ಮ ಗಾಂಧಿ, ಇವರೆಲ್ಲರನ್ನು ನಾವು ಸದಾಕಾಲ ಸ್ಮರಿಸಬೇಕು. ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ನಾವು ಹಗಲಿರಳು ಕಾಯಬೇಕು. ವಿಧಾನಸೌಧದ ಮೆಟ್ಟಿಲುಗಳು ನವಭಾರತದ ನಿರ್ಮಾಣಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ರಜನೀಶ್ ಗೋಯಲ್ ಮತ್ತು ಮಂಜುನಾಥ್ ಪ್ರಸಾದ್, ಡಾ. ಶಾಲಿನಿ ಗೋಯಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ರಂಗಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದ ವಿಶೇಷ: ಧಾರವಾಡ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ದಂಡಿಯಾತ್ರೆ ಮತ್ತು ವೀರ ರಾಣಿ ಕಿತ್ತೂರು ಚೆನ್ನಮ್ಮ ಕಿರುನಾಟಕಗಳು ಹಾಗೂ ಶಿವಮೊಗ್ಗ ರಂಗಾಯಣ ಪ್ರಸ್ತುತ ಪಡಿಸಿದ ಏಸೂರು ಕೊಟ್ಟರು ಈಸೂರು ಬಿಡೆವೂ ಮತ್ತು ವಿಧುರಾಶ್ವಥ್ ನಾಟಕಗಳು ಸಮಾರಂಭದ ವಿಶೇಷ ಆಕರ್ಷಣೆಗಳಾಗಿದ್ದವು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಜಾನಪದ ಪ್ರಕಾರಗಳಾದ ವೀರಗಾಸೆ, ಡೊಳ್ಳುಕುಣಿತ, ಪೂಜಾಕುಣಿತ, ಕೀಲು ಕುದುರೆ ಒಳಗೊಂಡಂತೆ ವಿವಿಧ ನೃತ್ಯ ಪ್ರಕಾರಗಳು ಪ್ರೇಕ್ಷಕರನ್ನು ರಂಜಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X