ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿನಿ ನಾಪತ್ತೆ
ಮಂಗಳೂರು, ಆ.14: ಪರೀಕ್ಷೆ ಬರೆಯಲೆಂದು ಹೋದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳೀಯ ನಿವಾಸಿ ಗಾಯತ್ರಿ (19) ನಾಪತ್ತೆಯಾದವರು.
ಗಾಯತ್ರಿ ದ್ವಿತೀಯ ವರ್ಷದ ಡಿಗ್ರಿ ಕಲಿಯುತ್ತಿದ್ದು, ಆ.12ರಂದು ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಮನೆಯಿಂದ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





