Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.15ರಂದು ಮಂಜೇಶ್ವರ ಶಾಸಕರಿಂದ ಉಪವಾಸ...

ಅ.15ರಂದು ಮಂಜೇಶ್ವರ ಶಾಸಕರಿಂದ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ14 Aug 2021 10:37 PM IST
share

ಮಂಜೇಶ್ವರ, ಆ.14: ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಪ್ರಯಾಣಿಕರ ಸಂಚಾರ ಸ್ವಾತಂತ್ರ್ಯವನ್ನು ಕಸಿಯುತ್ತಿರುವ ಕರ್ನಾಟಕ ಸರಕಾರದ ವಿರುದ್ಧ ಸ್ವಾತಂತ್ರ್ಯದಿನದಂದು (ಆ.15) ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ.

‘ಒಂದು ದೇಶ ಒಂದು ಜನತೆ’ ಎಂಬ ಸಂಕಲ್ಪವನ್ನು ಗಾಳಿಗೆ ತೂರಿ ಸಂಕುಚಿತ ರಾಜಕೀಯ ಲಾಭಕ್ಕಾಗಿ ಈ ನಾಡನ್ನು ವಿಭಜಿಸಲು ಹುನ್ನಾರ ನಡೆಸುವ ಕರ್ನಾಟಕ ಸರಕಾರವು ದೇಶದ ಸಮಾನತೆ ಮತ್ತು ಸಹಿಷ್ಣುತೆಯ ಸಂಸ್ಕೃತಿಯನ್ನು ಕೊನೆಗಾಣಿಸುವ ಪ್ರಯತ್ನದಲ್ಲಿದೆ. ರಾಜ್ಯದ ಗಡಿಗಳಲ್ಲಿ ಲಸಿಕೆಯನ್ನು ಪಡೆದವರಿಗೆ ಟೆಸ್ಟ್ ಇಲ್ಲದೆ ಪ್ರಯಾಣವನ್ನು ನಡೆಸಲು ಅನುಮತಿ ನೀಡಬೇಕು ಎಂಬ ಕೇಂದ್ರ ಸರಕಾರದ ಆದೇಶವನ್ನು ನಿರಾಕರಿಸಿ ಮಲಯಾಳಿಗಳನ್ನು ಅದರಲ್ಲೂ ಪ್ರತ್ಯೇಕವಾಗಿ ಕಾಸರಗೋಡು ಜಿಲ್ಲೆಯ ಜನತೆಯೊಂದಿಗೆ ಅವರ ವೈರಾಗ್ಯ ಮನೋಭಾವದ ನಡವಳಿಕೆಯು, 75ನೇ ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಭಾರತಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಎಕೆಎಂ ಅಶ್ರಫ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು, ರೋಗಿಗಳು, ಸಣ್ಣಪುಟ್ಟ ವ್ಯಾಪಾರಿ ಹಾಗೂ ಕೂಲಿ ಕಾರ್ಮಿಕರು ಸೇರಿದಂತೆ ದಿನಂಪ್ರತಿ ಸಂಚರಿಸುವ ಪ್ರಯಾಣಿಕರನ್ನು ಆರ್‌ಟಿಪಿಸಿಆರ್ ವರದಿಯನ್ನು ಮುಂದಿರಿಸಿ ಯಾತ್ರೆಯನ್ನು ನಿರ್ಬಂಧಿಸುವ ಕರ್ನಾಟಕ ಸರಕಾರವು ಜನ ಸಾಮಾನ್ಯರ ಮಧ್ಯೆ ಕೇರಳ ಜನತೆಯ ವಿರುದ್ಧ ಅಪಪ್ರಚಾರ ನಡೆಸುವವರಿಗೆ ಸಹಕಾರ ನೀಡುತ್ತಿದೆ. ಕರ್ನಾಟಕದಲ್ಲಿ ಕೋವಿಡ್ ಹರಡವುದು ಕೇರಳದ ಜನತೆಯ ಮೂಲಕ ಎಂಬ ಅಪಪ್ರಚಾರದ ಮೂಲಕ ಕೇರಳದ ವಿರುದ್ಧ ರಾಜಕೀಯ ಪಿತೂರಿ ಹಾಗೂ ಕರ್ನಾಟಕದ ಜನತೆಯಿಂದ ವಾಸ್ತವವನ್ನು ಮರೆಮಾಚಲು ಪ್ರಯತ್ನಿಸಲಾಗುತ್ತಿದೆ ಎಂದು ಅಶ್ರಫ್ ತಿಳಿಸಿದ್ದಾರೆ.

ಆ.15ರಂದು ತಲಪಾಡಿ ಗಡಿಯಲ್ಲಿ ನಡೆಯುವ ಉಪವಾಸ ಸತ್ಯಾಗ್ರಹವನ್ನು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X