ಮೈಸೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಮೈಸೂರು,ಆ.14: ಕಬ್ಬು ದರ ನಿಗದಿ, ದ್ವಿಪಕ್ಷೀಯ ಒಪ್ಪಂದ ಪತ್ರ , ಕಬ್ಬು ಕಟಾವು ಸಾಗಾಣಿಕೆ ದರ ನಿಗದಿಗೆ ಒತ್ತಾಯಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ್ ಕುಮಾರ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು, ಚಾಮರಾಜನಗರ ಜಿಲ್ಲೆ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದಿನಿಂದ ಕಬ್ಬು ದರ ನಿಗದಿ, ದ್ವಿಪಕ್ಷೀಯ ಒಪ್ಪಂದ ಪತ್ರ , ಕಬ್ಬು ಕಟಾವು ಸಾಗಾಣಿಕೆ ದರ ನಿಗದಿಗೆ ಒತ್ತಾಯಿಸಿ ನಿರಂತರ ಧರಣಿ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಇದೇ ವೇಳೆ ತಿಳಿಸಿದರು.
ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜ್, ರವಿಗೌಡ ಸೇರಿದಂತೆ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
Next Story





