ಕಾರ್ಕಳ : ಶಿವಂ ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್
ಕಾರ್ಕಳ : ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಮಹಾಲಕ್ಷ್ಮಿ ಪ್ರಭ ಕಾಂಪ್ಲೆಕ್ಸ್ ನಲ್ಲಿನ ಶಿವಂ ಎಲೆಕ್ಟ್ರಾನಿಕ್ಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಎಲೆಕ್ಟ್ರಾನಿಕ್ಸ್ ಉಪಕರಣಗಳು ಸಂಪೂರ್ಣ ಭಸ್ಮವಾಗಿದೆ.
ನಿಟ್ಟೆ ಗ್ರಾಮದ ದೂಪದಕಟ್ಟೆ ಸಮೀಪದ ಜೇಬೆಟ್ಟು ಗುರುಪ್ರಸಾದ್ ಶೆಟ್ಟಿ ಮಾಲಿಕತ್ವದ ಶಿವಂ ಎಲೆಕ್ಟ್ರಾನಿಕ್ಸ್ ನಲ್ಲಿ ರವಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದು ಅಗ್ನಿ ಶಾಮಕ ದಳ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದರೂ ಈ ವೇಳೆಗಾಗಲೇ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸಂಪೂರ್ಣ ಸುಟ್ಟು ಹೋಗಿರುವುದಾಗಿ ಅವರು ತಿಳಿಸಿದ್ದಾರೆ. ಘಟನೆಯಿಂದ ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story