ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ-ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಮಂಗಳೂರು, ಆ.15: ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಪಿಯು ಕಾಲೇಜು ಆವರಣದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾವಳಿ ಪಾಲಿಸಿ ಸರಳವಾಗಿ ಆಚರಿಸಲಾಯಿತು.
ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಹಾಗೂ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಜಂಟಿಯಾಗಿ ಧ್ವಜಾರೋಹಣಗೈದು, ಮಾತನಾಡಿದರು.
ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಸಂಚಾಲಕ ರಿಯಾಝ್ ಕಣ್ಣೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಂಶಾದ್ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಸಾರಾ ನಿಹಾಫ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ ವಂದಿಸಿದರು.






.jpeg)
.jpeg)





