ಉಡುಪಿ: ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ

ಉಡುಪಿ, ಆ.15: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಸಂಗೊಳ್ಳಿ ರಾಯಣ್ಣರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.
Next Story