ಸೈನಿಕರ ತ್ಯಾಗದಿಂದ ದೇಶದ ಅಖಂಡ ಬೆಳವಣಿಗೆ: ಸುನೀಲ್ ಕುಮಾರ್

ಉಡುಪಿ, ಆ.15: ಅಖಂಡ ಭಾರತದ ರಕ್ಷಣೆಯ ಹೊಣೆಗಾರಿಕೆಯನ್ನು ಹೊತ್ತಿರುವ ನಮ್ಮ ದೇಶದ ಸೈನಿಕರ ತ್ಯಾಗ, ಉತ್ಸಾಹ, ಪ್ರಮಾಣಿಕತೆ ಎಲ್ಲಾ ಭಾರತೀಯರಿಗೆ ಮಾದರಿಯಾಗಿದ್ದು, ಸೈನಿಕರ ಇಂತಹ ಕಾರ್ಯ ಚಟುವಟಿಕೆ ಗಳಿಂದ ಭಾರತ ಇಂದು ಅಖಂಡವಾಗಿ ಬೆಳೆದಿದೆ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕ ಬಳಿ ಹುತಾತ್ಮರಿಗೆ ಗೌರವ ಸಮರ್ಪಣೆ ನೆರವೇರಿಸಿ ಅವರು ಮಾತನಾಡುತಿದ್ದರು. ನಂತರ ಹುತಾತ್ಮ ಸ್ಮಾರಕ ಆವರಣದಲ್ಲಿ ಸಚಿವರು ಗಿಡಗಳನ್ನು ನೆಟ್ಟರು.
ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿನಿಖಿಲ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
Next Story





