‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಹಂಚಿಕೆಯಾಗಲಿ’

ಮಂಗಳೂರು, ಆ.15: ಸ್ವಾತಂತ್ರ್ಯದ ನಿಜ ಅರ್ಥ ಸಾಕಾರವಾಗಬೇಕಾದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಾಗರಿಕ ಸಮಾಜದ ಎಲ್ಲ ಸೌಲಭ್ಯಗಳು ಸಮರ್ಪಕವಾಗಿ ಹಂಚಿಕೆಯಾಗಬೇಕು ಗಂಜಿಮಠ ಗ್ರಾಪಂ ಅಧ್ಯಕ್ಷ ನೋಣಯ್ಯ ಕೋಟ್ಯಾನ್ ಅಭಿಪ್ರಾಯಪಟ್ಟರು.
ಗಂಜಿಮಠ ಗ್ರಾಪಂ ಕಚೇರಿ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆದ್ಯತೆಯ ಮೇರೆಗೆ ಶ್ರೀ ಸಾಮಾನ್ಯನಿಗೆ ಸರಕಾರದ ಎಲ್ಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಪಂಚಾಯತ್ ಅಂಗವಿಕಲ ಶ್ರೇಯೋಭಿವೃದ್ದಿ ನಿಧಿಯಿಂದ ಅಂಗವಿಕಲರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಗ್ರಾಪಂ ಸದಸ್ಯ ಝಾಕೀರ್ ಆರ್.ಎಸ್. ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಕುಮುದಾ ನಾಯ್ಕಾ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಎಸ್. ಸ್ವಾಗತಿಸಿ, ವಂದಿಸಿದರು.
Next Story





