Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರು...

ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರು ವರ್ಷದೊಳಗೆ ಮನೆ ನಿರ್ಮಿಸಲು ಮುಂದಾಗದಿದ್ದಲ್ಲಿ ಹಣ ಹಿಂದಕ್ಕೆ: ಜಿಲ್ಲಾಧಿಕಾರಿ

"ಜಮೀನು ಕಳೆದುಕೊಂಡವರಿಗೆ ಸ್ಥಳೀಯವಾಗಿ ಅರಣ್ಯ ಭೂಮಿ ಹಂಚಿಕೆಗೆ ಕ್ರಮ"

ವಾರ್ತಾಭಾರತಿವಾರ್ತಾಭಾರತಿ15 Aug 2021 11:12 PM IST
share
ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರು ವರ್ಷದೊಳಗೆ ಮನೆ ನಿರ್ಮಿಸಲು ಮುಂದಾಗದಿದ್ದಲ್ಲಿ ಹಣ ಹಿಂದಕ್ಕೆ: ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಆ.15: ಜಿಲ್ಲೆಯಲ್ಲಿ ಈ ಹಿಂದೆ ಸಂಭವಿಸಿದ ಅತಿವೃಷ್ಟಿ ವೇಳೆ ಮನೆ ಹಾಗೂ ಜಮೀನು ಕಳೆದುಕೊಂಡವರ ಪೈಕಿ ಎಲ್ಲ ಸಂತ್ರಸ್ಥರ ಖಾತೆಗೆ ತಲಾ 1 ಲಕ್ಷ ರೂ. ಹಣ ಜಮೆ ಮಾಡಲಾಗಿದೆ. ಮನೆ ನಿರ್ಮಾಣಕ್ಕೆ ಮುಂದಾದವರಿಗೆ 5 ಲಕ್ಷ ರೂ. ಹಂತಹಂತವಾಗಿ ಬಿಡುಗಡೆಯಾಗಲಿದೆ. ಕೆಲವರು ಮನೆ ನಿರ್ಮಾಣಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಹಣ ಬಿಡುಗಡೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.

ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದೊಂದಿಗೆ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮನೆ ಕಳೆದುಕೊಂಡ ಸಂತ್ರಸ್ಥರ ಪೈಕಿ 111 ಮನೆಗಳ ಮಾಲಕರಿಗೆ ಸಂಪೂರ್ಣ ಹಣ ಬಿಡುಗಡೆಯಾಗಿದೆ. ಮನೆ ಕಳೆದುಕೊಂಡ ಎಲ್ಲರಿಗೂ ಆರಂಭದಲ್ಲಿ 1 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಮನೆ ನಿರ್ಮಾಣಕ್ಕೆ ಮುಂದಾಗದ 375 ಮನೆಗಳ ಮಾಲಕರಿಗೆ ಹಣ ಬಿಡುಗಡೆ ಬಾಕಿ ಇದ್ದು, ಒಂದು ವರ್ಷದೊಳಗೆ ಮನೆ ನಿರ್ಮಿಸಲು ಮುಂದಾದಲ್ಲಿ ಮಾತ್ರ ಹಣ ಬಾಕಿ ಹಣ ಬಿಡುಗಡೆಯಾಗಲಿದೆ. ಇಲ್ಲದಿದ್ದಲ್ಲಿ ಹಣ ಸರಕಾರಕ್ಕೆ ಹಿಂದಿರುಗಲಿದೆ ಎಂದರು.

ಮನೆಗಳನ್ನು ಕಳೆದುಕೊಂಡ ಸಂತ್ರಸ್ಥರು ಆರಂಭದಲ್ಲಿ ಬೇರೆಡೆ ನಿವೇಶನ ನೀಡಿದಲ್ಲಿ ಅಲ್ಲಿ ಮನೆ ಕಟ್ಟಿಕೊಳ್ಳುವುದಾಗಿ ಹೇಳಿದ್ದರು. ಇದಕ್ಕಾಗಿ ಮೂಡಿಗೆರೆ ತಾಲೂಕಿನ ಎರಡು ಭಾಗದಲ್ಲಿ ನಿವೇಶನಕ್ಕೆ ಜಾಗ ಗುರುತಿಸಲಾಗಿದೆ. ಈಗ ಅವರು ಜಿಲ್ಲಾಡಳಿತ ನೀಡಿರುವ ನಿವೇಶನಗಳಲ್ಲಿ ಮನೆ ಕಟ್ಟಿಕೊಳ್ಳಲು ಆಗಲ್ಲ ಎನ್ನುತ್ತಿದ್ದಾರೆ. ಈ ಕಾರಣದಿಂದ ಮನೆ ನಿರ್ಮಾಣಕ್ಕೆ ಸಂತ್ರಸ್ಥರು ಮುಂದಾಗಿಲ್ಲ. ಪರಿಣಾಮ ಹಣ ಬಿಡುಗಡೆಯಾಗುತ್ತಿಲ್ಲ ಎಂದರು.

ಈ ವೇಳೆ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಸಿ.ಟಿ.ರವಿ, ಅತಿವೃಷ್ಟಿಯಿಂದ ಕೃಷಿ ಜಮೀನು ಕಳೆದುಕೊಂಡವರಿಗೆ ಪರ್ಯಾಯ ಜಾಗ ನೀಡಲು ಕಂಪೆನಿ ಎಸ್ಟೇಟ್‍ಗಳು ಮಾಡಿರುವ ಒತ್ತುವರಿಯನ್ನು ಖುಲ್ಲಾ ಮಾಡಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಇದರಿಂದ ಕೃಷಿ ಭೂಮಿ ಕಳೆದುಕೊಂಡುವರಿಗೆ ರೆಡಿಮೇಡ್ ಕಾಫಿ ತೋಟ ಸಿಗುತ್ತಿತ್ತು. ಆದರೆ ಸಂತ್ರಸ್ಥ ರೈತರು ಮನೆ ಒಂದು ಕಡೆ, ಜಮೀನು ಒಂದು ಕಡೆ ಆಗುತ್ತದೆ ಎಂಬ ಕಾರಣಕ್ಕೆ ನಿರ್ಲಕ್ಷ್ಯ ತಾಳಿದ್ದಾರೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ತೀರ್ಮಾನ ನೆನೆಗುದಿಗೆ ಬಿದ್ದಿದ್ದು, ಸಮಸ್ಯೆ ಬಗೆಹರಿದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಬೇಕೆಂದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಕೃಷಿ ಜಮೀನು ಕಳೆದುಕೊಂಡ ಸಂತ್ರಸ್ಥ ರೈತರಿಗೆ ಸ್ಥಳೀಯವಾಗಿ ಪರ್ಯಾಯ ಜಮೀನು ನೀಡುವ ನಿಟ್ಟಿನಲ್ಲಿ ಸ್ಥಳೀಯ ಅರಣ್ಯ ಇಲಾಖೆಯ ಜಮೀನನ್ನು ಕಂದಾಯ ಇಲಾಖೆಗೆ ಪಡೆದು ಅರಣ್ಯ ಇಲಾಖೆಗೆ ಬೇರೆಡೆ ಕಂದಾಯ ಜಮೀನು ನೀಡಲು ಕ್ರಮವಹಿಸಲಾಗುತ್ತಿದೆ. ಇದರಿಂದ ಸಂತ್ರಸ್ಥರಿಗೆ ಸ್ಥಳೀಯವಾಗಿ ಜಮೀನು ನೀಡಲು ಸಾಧ್ಯವಾಗಲಿದೆ. ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ರೈತರಿಗೆ ಪರ್ಯಾಯ ಜಮೀನು ನೀಡಬೇಕಿದ್ದು, ಇದಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ. ಈಗಾಗಲೇ 43 ಎಕರೆ ಜಾಗ ಗುರುತಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಹೊರ ರಾಜ್ಯಗಳ ಪ್ರವಾಸಿಗರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಭೀತಿ ಸಾರ್ವಜನಿಕರಲ್ಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಹೊರ ರಾಜ್ಯಗಳ ಪ್ರವಾಸಿಗರಿಗೆ ಜಿಲ್ಲೆಯಲ್ಲಿ ಪ್ರತ್ಯೇಕ ಕಾನೂನು ಮಾಡಿಲ್ಲ. ಇದಕ್ಕಾಗಿ ರಾಜ್ಯ ಸರಕಾರದ ಆದೇಶವನ್ನು ಜಿಲ್ಲೆಯಲ್ಲೂ ಪಾಲಿಸಲಾಗುತ್ತಿದೆ. ಪ್ರವಾಸಿಗರ ತಪಾಸಣೆ, ಕೋವಿಡ್ ಟೆಸ್ಟ್ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯ ಮುಳ್ಳಯ್ಯನಗಿರಿ ವ್ಯಾಪ್ತಿಗೆ ಬರುವ ಪ್ರವಾಸಿಗರು ಮತ್ತು ವಾಹನಗಳಿಗೆ ನಿರ್ಬಂಧ ಹೇರಿದ್ದು, ಪ್ರತಿದಿನ ಕೇವಲ 300 ವಾಹನ ಹಾಗೂ 1200 ಪ್ರವಾಸಿಗರಿಗೆ ಮಾತ್ರ ಬಿಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ನಿಯಂತ್ರಣದಲ್ಲಿದೆ. ಎನ್.ಆರ್.ಪುರ, ಕೊಪ್ಪ ಭಾಗಕ್ಕೆ ಕೇರಳದಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಯ ಕಾಫಿ ಎಸ್ಟೇಟ್‍ಗಳಿಗೆ ಬರುವ ಕಾರ್ಮಿಕರಲ್ಲಿ ಸೋಂಕು ಒತ್ತೆಯಾದಲ್ಲಿ ಅವರನ್ನು ಎಷ್ಟೇಟ್ ವ್ಯಾಪ್ತಿಯಲ್ಲೇ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಶಾಲಾ ಕಾಲೇಜುಗಳು ಆರಂಭವಾಗುತ್ತಿರುವ ಸಂದರ್ಭ ಕಾಲೇಜು ಮಕ್ಕಳಿಗೆ ವ್ಯಾಕ್ಸಿನ್ ಕೊರತೆ ಬಗ್ಗೆ ಗಮನಸೆಳೆದಾದ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರಮೇಶ್, ಕೋವಿಡ್ ವ್ಯಾಕ್ಸಿನೇಶನ್ ಅಭಿಯಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡುವ ಉದ್ದೇಶದಿಂದ ಎಸ್‍ಒಪಿ ನೇಮಕ ಮಾಡಿ ಎಲ್ಲ ಮಕ್ಕಳಿಗೂ ವ್ಯಾಕ್ಸಿನ್ ನೀಡಲು ಕ್ರಮವಹಿಸಲಾಗುವುದು ಎಂದು ಸಿಎಂ ಅವರೇ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಜಿಲ್ಲೆಯಲ್ಲಿ ಅನಧೀಕೃತ ಹೋಮ್‍ಸ್ಟೇಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಜಿಲ್ಲಾಧಿಕಾರಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಜಿಲ್ಲೆಯ ಶಾಸಕರಲ್ಲಿ ಸಮನ್ವಯದ ಕೊರೆತೆ ಇದೆ ಎಂದು ಶಾಸಕ ಕುಮಾರಸ್ವಾಮಿ ಹಾಗೂ ಸಿ.ಟಿ.ರವಿ ಅವರ ಆರೋಪ ಪ್ರತ್ಯಾರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಆರಗ ಜ್ಞಾನೇಂದ್ರ ಉತ್ತರಿಸಿ, ಕುಮಾರಸ್ವಾಮಿ ಹಾಗೂ ಸಿ.ಟಿ.ರವಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಆಪ್ತ ಸ್ನೇಹಿತರು. ಇಬ್ಬರ ನಡುವೆ ಪ್ರೀತಿ ಹೆಚ್ಚಾದ ಕಾರಣಕ್ಕೆ ಇಂತಹ ಗೊಂದಲ ಸೃಷ್ಟಿಯಾಗಿದೆ ಅಷ್ಟೇ. ಶಾಸಕ ಕುಮಾರಸ್ವಾಮಿ ಅವರು ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿಲ್ಲ ಎಂದು ಆರೋಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿಯಲ್ಲೂ ಅತೀ ಹೆಚ್ಚು ಮಳೆಯಾಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವಾಗಿದೆ. ಆದರೂ ಈ ತಾಲೂಕುಗಳನ್ನು ಪಟ್ಟಿಗೆ ಸೇರಿಸಿಲ್ಲ. ಇದನ್ನು ಸಿಎಂ ಗಮನಕ್ಕೆ ತರಲಾಗಿದ್ದು, ಮೂಡಿಗೆರೆ ಸೇರಿದಂತೆ ಹೆಚ್ಚು ಮಳೆ ಹಾನಿಯಾಗಿರುವ ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಜಾನುವಾರು ಕಳ್ಳಸಾಗಣೆ ಸಂಬಂಧ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜಾನುವಾರು ಕಳ್ಳಸಾಗಣೆ, ಮಾಂಸ ಮಾರಾಟಗಾರರನ್ನು ನಿಯಂತ್ರಿಸಲು ಕಠಿಣ ಕಾನೂನು ಕ್ರಮಕ್ಕೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾನುವಾರು ಕಳ್ಳಸಾಗಣೆದಾರರು ಮಾತ್ರವಲ್ಲದೇ ಮಾಂಸ ಮಾಡುವವರಿಗೆ ಜಾನುವಾರು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಜಾನುವಾರುಗಳನ್ನು ಸಾಗಣೆ ಮಾಡುವವರು ಸರಿಯಾದ ದಾಖಲೆಗಳನ್ನು ಹೊಂದಿದ್ದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಜಾನುವಾರು ಸಾಕುವ ಉದ್ದೇಶದಿಂದ ಸಾಗಣೆ ಮಾಡುವವರು ಈ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಸಾಗಣೆ ಮಾಡಬೇಕೆಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X