ಸ್ವಾತಂತ್ರ್ಯ ದಿನಾಚರಣೆ: ಭಾರತ-ಪಾಕ್ ಗಡಿಯಲ್ಲಿ ಸಿಹಿ ವಿನಿಮಯ

ಅಟ್ಟಾರಿ, ಆ. 15: ಸ್ವಾತಂತ್ರ ದಿನಾಚರಣೆ ಸಂದರ್ಭ ಭಾರತೀಯ ಸೇನೆ ಹಾಗೂ ಬಿಎಸ್ಎಫ್ ಸಿಬ್ಬಂದಿ ರವಿವಾರ ಪಾಕಿಸ್ತಾನ ಗಡಿ ಭದ್ರತಾ ಯೋಧರೊಂದಿಗೆ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಹಾಗೂ ಅಂತಾರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಸಿಹಿ ವಿನಿಮಯ ಮಾಡಿಕೊಂಡರು.
ಭಾರತೀಯ ಸೇನೆ ಪಾಕಿಸ್ತಾನದ ಸೇನಾ ಪಡೆಗಳೊಂದಿಗೆ ಮೆಂಧರ್ನ ತಟಪಾನಿ ಕ್ರಾಸಿಂಗ್ ಪಾಯಿಂಟ್, ಪೂಂಛ್ ಜಿಲ್ಲೆಯ ಎಲ್ಒಸಿ ಹಾಗೂ ರಾವಲಕೋಟ ಕ್ರಾಸಿಂಗ್ ಪಾಯಿಂಟ್ನಲ್ಲಿ ಸಿಹಿ ವಿನಿಮಯ ಮಾಡಿಕೊಂಡಿತು ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತದ ಬಿಎಸ್ಎಫ್ ಪಡೆ ಭಾರತೀಯ ಗಡಿ ಭದ್ರತಾ ಪಡೆಯ ಸಿಬ್ಬಂದಿ ಯೋಧರೊಂದಿಗೆ ಸಿಹಿ ವಿನಿಮಯ ಮಾಡಿಕೊಂಡರು. ಅಲ್ಲದೆ, ಎರಡೂ ಕಡೆ ಭದ್ರತಾ ಸಿಬ್ಬಂದಿ ಪರಸ್ಪರ ಹಸ್ತಲಾಘವ ಮಾಡಿದರು ಎಂದು ವಕ್ತಾರರು ತಿಳಿಸಿದ್ದಾರೆ.
Next Story





