ಲಘು ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

ಶಿರಾಡಿ ಘಾಟ್
ಸಕಲೇಶಪುರ: ಭಾರೀ ಮಳೆಯಿಂದ ಹಾನಿಗೊಳಗಾಗಿದ್ದ ಶಿರಾಡಿ ಘಾಟ್ ರಸ್ತೆ ಇದೀಗ ಲಘು ವಾಹನಗಳಿಗೆ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶಿಸಿದ್ದಾರೆ.
ಕಳೆದ 15 ದಿನಗಳಿಂದ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದ ಪರಿಣಾಮ ಸ್ಥಳೀಯರಿಗೆ ಸೇರಿದಂತೆ ಸಾರ್ವಜನಿಕರಿಗೆ ಪ್ರಯಾಣಕ್ಕೆ ಅನಾನುಕೂಲವಾಗಿತ್ತು.
ಜಿಲ್ಲಾಧಿಕಾರಿಗಳ ಆದೇಶದಂತೆ ದ್ವಿಚಕ್ರ ವಾಹನ, ಕಾರು, ಜೀಪು, ಟೆಂಪೊ, ಬಸ್ಸುಗಳು, ರಾಜಹಂಸ, ಐರಾವತ ಹಾಗೂ 20 ಟನ್ ತೂಕದ ಲಾರಿಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ:6:00 ರಿಂದ ಸಂಜೆ 5:00 ಗಂಟೆವರೆಗೆ ಸಂಚರಿಸಬಹುದಾಗಿರುತ್ತದೆ.
ಇನ್ನು ಬುಲೆಟ್ ಟ್ಯಾಂಕರ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಜಾಸೀಸ್ ವಾಹನಗಳು, ಏಕ್ಸೆಲ್ ಟ್ರಕ್ ಟ್ರೈಲರ್, ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣಿ ವಾಹನಗಳಿಗೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು ದಿನದ 24 ಗಂಟೆಯೂ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
Next Story





