ಆ.30ರವರೆಗೆ ದ.ಕ. ಜಿಲ್ಲೆಯಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ: ಡಿಸಿ ಡಾ. ರಾಜೇಂದ್ರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಆ.30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೋಮವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರ ತನಕ ರಾತ್ರಿ 7ರ ತನಕ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
Next Story





