ಕಪ್ಪೆಟ್ಟು ನೂತನ ಅಂಬೇಡ್ಕರ ಭವನ ಉದ್ಘಾಟನೆ

ಉಡುಪಿ, ಆ.17: ಉಡುಪಿ ಜಿಪಂ, ತಾಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಂಬಲಪಾಡಿ ಗ್ರಾಪಂಗಳ ಸಂಯುಕ್ತ ಆಶ್ರಯದಲ್ಲಿ ಕಿದಿಯೂರುವಿನ ಕಪ್ಪೆಟ್ಟುವಿನಲ್ಲಿ ನಿರ್ಮಿಸಿರುವ ನೂತನ ಅಂಬೇಡ್ಕರ್ ಭವನವನ್ನು ಮಂಗಳವಾರ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಪಂ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಅಂಬೇಡ್ಕರ್ ಭವನದ ಅಧ್ಯಕ್ಷ ಮಂಜುನಾಥ್ ಕಪ್ಪೆಟ್ಟು, ದಲಿತ ಮುಖಂಡ ಜಯನ್ ಮಲ್ಪೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಅಂಬಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಮೊದಲಾದವರು ಉಪಸ್ಥಿತರಿದ್ದರು.
Next Story





