Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೇಷ್ಮೆ ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ...

ರೇಷ್ಮೆ ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವ ಡಾ. ನಾರಾಯಣಗೌಡ‌

ದೇಶದ ಶೇ. 50 ರಷ್ಟು ರೇಷ್ಮೆ ರಾಜ್ಯದಲ್ಲಿ ಉತ್ಪಾದಿಸುವುದು ನಮ್ಮ ಗುರಿ

ವಾರ್ತಾಭಾರತಿವಾರ್ತಾಭಾರತಿ17 Aug 2021 5:01 PM IST
share
ರೇಷ್ಮೆ ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವ ಡಾ. ನಾರಾಯಣಗೌಡ‌

ಬೆಂಗಳೂರು, ಆ. 17: ರೇಷ್ಮೆ ಮಾರುಕಟ್ಟೆಯಲ್ಲಿ ಲೂಟಿ ಮಾಡುವ ದಂಧೆಗೆ ಇನ್ನೂ ಕಡಿವಾಣ ಹಾಕಿಲ್ಲ. ನಾನು ಈ ಹಿಂದೆ ರೇಷ್ಮೆ ಸಚಿವನಾಗಿದ್ದಾಗಲೇ ಇ- ಪೇಮೆಂಟ್ ಗೆ ಸಿದ್ದತೆ ಮಾಡಲಾಗಿತ್ತು. ಈ ವರೆಗೂ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ ಯಾಕೆ ಎಂದು ರೇಷ್ಮೆ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳ ವಿರುದ್ಧ ಗರಂ ಆದರು.  ಇ - ಪೇಮೆಂಟ್ ತಕ್ಷಣ ಆರಂಭವಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ವಿಕಾಸ ಸೌಧದಲ್ಲಿ ಇಂದು ರೇಷ್ಮೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ವಿಳಂಬ ನೀತಿಗೆ ಅಕ್ರೋಶ ವ್ಯಕ್ತಪಡಿಸಿದರು. ಕೆಲಸ ಮಾಡುವ ಮನಸ್ಸಿಲ್ಲದಿದ್ದರೆ ಸ್ವಯಂ ನಿವೃತ್ತಿ ಪಡೆಯಿರಿ. ಕೆಲಸ ಮಾಡಲು ಅಸಕ್ತಿ ಇರುವ ಸಾಕಷ್ಟು ಜನರಿದ್ದಾರೆ‌. ಹಣ ಮಾಡಲು ಸಚಿವನಾಗಿ ಬಂದಿಲ್ಲ. ವರ್ಷದ ಹಿಂದೆ ಹೇಳಿದ್ದ ಕೆಲಸ ಇನ್ನೂ ಜಾರಿಗೆ ತಂದಿಲ್ಲ. ಏನು ಮಾಡುತ್ತಿದ್ದೀರಿ ಎಂದು ಕಿಡಿ ಕಾರಿದರು. ಇ-ಟೆಂಡರ್ 100% ಆಗಬೇಕು. ಅದೇ ರೀತಿ ಇ- ಪೇಮೆಂಟ್ ಕೂಡ 100% ಆಗಬೇಕು. ಕೆಲವು ಮಾರುಕಟ್ಟೆಯಲ್ಲಿ ಇ- ಪೇಮೆಂಟ್ ಇದ್ದರೂ, ಪರ್ಯಾಯವಾಗಿ ನಗದು ವ್ಯವಹಾರ ಕೂಡ ಇದೆ. ಒಂದು ರೂಪಾಯಿ ವ್ಯವಹಾರ ಕೂಡ ನಗದು ರೂಪದಲ್ಲಿ ಆಗಬಾರದು ಎಂದು ಸಚಿವ ನಾರಾಯಣಗೌಡ ಸ್ಪಷ್ಟ ಸೂಚನೆ ನೀಡಿದರು. 

ಎಲ್ಲ ರೇಷ್ಮೆ ಮಾರುಕಟ್ಟೆಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಕೆ ಆಗಬೇಕು. ಹಾಗೂ ಇಲಾಖೆಯ ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್  ಅಳವಡಿಕೆ ಆಗಬೇಕು. ಸಿಲ್ಕ್ & ಮಿಲ್ಕ್  ರೈತರಿಗೆ ಜೀವನಾಧಾರವಾಗಿದೆ. ಹೆಣ್ಣುಮಕ್ಕಳು ಶ್ರಮವಹಿಸಿ ರೇಷ್ಮೆ ಬೆಳೆಯುತ್ತಿದ್ದಾರೆ. ಯಾವುದೇ ರೀತಿಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವರ್ಷದಲ್ಲಿ ದೇಶದ ಒಟ್ಟಾರೆ ಉತ್ಪಾದನೆಯಲ್ಲಿ  ಶೇ 50 ರಷ್ಟು ರೇಷ್ಮೆ ಉತ್ಪಾದನೆ ನಮ್ಮ ಗುರಿ

ದೇಶದಲ್ಲಿ  23820 ಮೆ.ಟನ್ ರೇಷ್ಮೆ ಉತ್ಪಾದನೆ ಇದೆ. ಆ ಪೈಕಿ  ರಾಜ್ಯದಲ್ಲಿಯೇ 11292 ಮೆ.ಟನ್ ರೇಷ್ಮೆ ಉತ್ಪಾದನೆ ಆಗುತ್ತಿದೆ.  ದೇಶದ ಒಟ್ಟೂ ಉತ್ಪಾದನೆಯ ಶೇ. 47 ರಷ್ಟು ಉತ್ಪಾದನೆ ರಾಜ್ಯದಲ್ಲಿ ಆಗುತ್ತಿದೆ. ಇದು ಶೇ. 50 ರಷ್ಟಕ್ಕೆ ಏರಬೇಕು. ಒಂದು ವರ್ಷದಲ್ಲಿ ಈ ಗುರಿಯನ್ನು ತಲುಪಬೇಕು. ರೇಷ್ಮೆ ಬೆಳೆಯುವ ರೈತರಿಗೆ ಎಲ್ಲ ರೀತಿಯ ಸಹಕಾರ ನೀಡಿ ಈ ಗುರಿಯನ್ನು ಮುಟ್ಟುವಂತೆ ಮಾಡಬೇಕು ಎಂದು ಹೇಳಿದರು.  ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್ ನವರು ತಿಂಗಳಿಗೆ 500 kg ಯಷ್ಟು ರೇಷ್ಮೇಯನ್ನು ಹೊರಗಡೆಯಿಂದ ಖರೀದಿಸುತ್ತಿದ್ದಾರೆ. ಇನ್ನುಮುಂದೆ ಇಲಾಖೆಯ ಮಾರುಕಟ್ಟೆಯಿಂದಲೇ ಖರೀದಿಸಬೇಕು. ಗುಣಮಟ್ಟದ ರೇಷ್ಮೆ ನಮ್ಮಲ್ಲಿಯೇ ಸಿಗುತ್ತದೆ. ಕಡ್ಡಾಯವಾಗಿ ಇಲಾಖೆಯಿಂದಲೇ ಖರೀದಿಸಬೇಕು ಎಂದು ಸಚಿವರು ಸೂಚಿಸಿದರು. 

ರೇಷ್ಮೆ ಇಲಾಖೆ ಯೋಜನೆಗಳ ವಿವರ ರೈತರಿಗೆ ಸಿಗುವಂತೆ ಮಾಡಲು ಪ್ರತ್ಯೇಕ ಆ್ಯಪ್ ರಚನೆ ಮಾಡಬೇಕು. ಏರ್ಪೋರ್ಟ್ ನಂತ ಪ್ರಮುಖ ಸ್ಥಳಗಳಲ್ಲಿ ರೇಷ್ಮೆ ಉತ್ಪನ್ನ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ಜಿಲ್ಲೆಗಳಿಗೆ ಭೇಟಿ ಕೊಡಬೇಕು. 24 ರೊಳಗೆ ಮಾಹಿತಿ ಕೊಡಬೇಕು.‌ 25 ರಂದು ಜಿಲ್ಲಾವಾರು ಪ್ರಗತಿ ಪರಿಶೀಲನೆ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು. ನವದೆಹಲಿ,  ಏರ್ಪೋರ್ಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ಮಳಿಗೆ ತೆರೆಯಲು ತೀರ್ಮಾನಿಸಲಾಗಿದ್ದು, ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ತಿಳಿಸಿದರು. 

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ವಿ ಅಮರಶೆಟ್ಟಿ, ರೇಷ್ಮೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ರೇಷ್ಮೆ ಇಲಾಖೆ ಆಯುಕ್ತ ಪೆದ್ದಪ್ಪಯ್ಯ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X