Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಫಾರ್ಮ ಪಾರ್ಕ್, ಪ್ಲಾಸ್ಟಿಕ್...

ರಾಜ್ಯದಲ್ಲಿ ಫಾರ್ಮ ಪಾರ್ಕ್, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಕೇಂದ್ರ ಸಚಿವ ಭಗವಂತ್ ಖೂಬಾ

ವಾರ್ತಾಭಾರತಿವಾರ್ತಾಭಾರತಿ17 Aug 2021 7:04 PM IST
share
ರಾಜ್ಯದಲ್ಲಿ ಫಾರ್ಮ ಪಾರ್ಕ್, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಕೇಂದ್ರ ಸಚಿವ ಭಗವಂತ್ ಖೂಬಾ

ಬೀದರ್, ಆ.17: ಕರ್ನಾಟಕದಲ್ಲಿ ಒಂದು ಫಾರ್ಮ ಪಾರ್ಕ್ ಮತ್ತು ಒಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರಕಾರ ಯೋಜಿಸಿದೆ ಎಂದು ಕೇಂದ್ರ ನವೀನ ಮತ್ತು ನವೀಕರಿಸಬಲ್ಲ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ತಿಳಿಸಿದರು.

ಮಂಗಳವಾರ ಬೀದರ್‍ನಲ್ಲಿ ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ ಫಾರ್ಮ ಪಾರ್ಕ್ ಅನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಮೀನು ಹೊರತುಪಡಿಸಿ ಇತರ ಮೂಲಸೌಕರ್ಯಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಹೂಡಿಕೆ ಇರುವ ಯೋಜನೆ ಇದಾಗಿದೆ ಎಂದರು.

ರಾಜ್ಯ ಸರಕಾರ ಜಮೀನು ನೀಡಬೇಕಾಗುವುದು. ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ಕಡಿಮೆ ದರದಲ್ಲಿ ವಿದ್ಯುತ್, ನೀರು, ಜಮೀನು, ಟ್ರೀಟ್‍ಮೆಂಟ್ ಪ್ಲಾಂಟ್ ನೀಡಬೇಕಾಗುತ್ತದೆ. ಬಹುತೇಕ ನಮ್ಮ ರಾಜ್ಯಕ್ಕೆ ಇದು ಸಿಗುವ ಅವಕಾಶವಿದೆ ಎಂದು ಭಗವಂತ್ ಖೂಬಾ ತಿಳಿಸಿದರು.

ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಮಂಗಳೂರು ಮತ್ತು ಯಾದಗಿರಿಯಿಂದ ಪ್ರಸ್ತಾವನೆ ಬಂದಿದೆ. ಕೆಮಿಕಲ್ ಇಂಡಸ್ಟ್ರಿಗಳಿರುವ ಕಾರಣ ಮಂಗಳೂರಿನಲ್ಲಿ ಇದು ಸ್ಥಾಪನೆ ಆಗುವ ಸಾಧ್ಯತೆ ಹೆಚ್ಚು. ಮೂಲಸೌಕರ್ಯಕ್ಕೆ 100 ಕೋಟಿ ಹೂಡಿಕೆ ಇರುತ್ತದೆ ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ಹೆಚ್ಚು ಮುತುವರ್ಜಿ-ಹಣದ ಸಹಕಾರ ವಹಿಸಿದಾಗ ಯೋಜನೆ ಸಿಗಲು ಸಾಧ್ಯವಾಗುತ್ತದೆ. ಬೀದರ್ ಜಿಲ್ಲೆಗೆ ಬರಬೇಕಿದ್ದ ಯೋಜನೆಗಳು ಹಿಂದೆ ಕಾಂಗ್ರೆಸ್ ರಾಜ್ಯ ಸರಕಾರದ ಅಸಹಕಾರ, ಜಮೀನು ಸಿಗದ ಕಾರಣದಿಂದ ಅನುಷ್ಠಾನಗೊಂಡಿರಲಿಲ್ಲ. ಈಗ ಕೇಂದ್ರ-ರಾಜ್ಯ ಸರಕಾರಗಳೆರಡೂ ಬಿಜೆಪಿಯದ್ದೇ ಇವೆ. ಆದುದರಿಂದ, ಸಮಸ್ಯೆ ಆಗಲಾರದು ಎಂದು ಅವರು ತಿಳಿಸಿದರು.

ಪ್ರಧಾನಿಯ ಜನಪ್ರಿಯತೆ ಹೆಚ್ಚಳದ ಆತಂಕದಿಂದ ಬಿಜೆಪಿಯೇತರ ರಾಜ್ಯ ಸರಕಾರಗಳು ಕಡಿಮೆ ಬೆಲೆಯ ಔಷಧಿ ನೀಡುವ ಜನೌಷಧಿ ಕೇಂದ್ರಗಳನ್ನು ತೆರೆದಿಲ್ಲ. ಅಂಥ ರಾಜ್ಯಗಳಲ್ಲಿ ತಮ್ಮ ಖಾತೆ ವತಿಯಿಂದ ಜನೌಷಧಿ ಕೇಂದ್ರಗಳನ್ನು ತೆರೆದು ವಹಿವಾಟು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಬೀದರ್‍ನಲ್ಲಿ ಮುನ್ಸಿಪಾಲಿಟಿ ಜೊತೆ ಸಹಭಾಗಿತ್ವದಲ್ಲಿ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಯಾರಾದರೂ ಹೂಡಿಕೆದಾರರು ಮುಂದಾದರೆ ಅವಕಾಶ ನೀಡಲಾಗುವುದು. ಒಂದು ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ 3.75 ಕೋಟಿಯಿಂದ 4 ಕೋಟಿ ಹೂಡಿಕೆ ಅಗತ್ಯವಿದೆ. ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ 4ರಿಂದ 5 ಹೂಡಿಕೆದಾರರು ಖಾಸಗಿ- ಸಾರ್ವಜನಿಕ ರಂಗದ ಸಹಭಾಗಿತ್ವದಡಿ ವಿದ್ಯುತ್ ಉತ್ಪಾದನೆಗೆ ಉತ್ಸಾಹ ತೋರುತ್ತಿದ್ದಾರೆ ಎಂದು ಭಗವಂತ್ ಖೂಬಾ ವಿವರಿಸಿದರು.

ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ನೆರವು ಪಡೆಯಲಾಗುವುದು. ಈ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದ ಸಚಿವನಾಗಿ ಗರಿಷ್ಠ ಪ್ರಯತ್ನ ಮಾಡಲಿದ್ದೇನೆ. ಜಿಲ್ಲೆಯ ಆರು ಶಾಸಕರು ಪಕ್ಷಭೇದ ಮರೆತು ಜಿಲ್ಲೆಗೆ ಅವಶ್ಯಕ ಯೋಜನೆಗಳ ಜಾರಿಗೆ ಶ್ರಮಿಸಬೇಕಿದೆ. ರಾಜಕಾರಣ ಮಾಡಲು ಹತ್ತಾರು ವಿಷಯ ಇರುತ್ತದೆ. ಆದರೆ, ಅಭಿವೃದ್ಧಿ ಯೋಜನೆ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಅವರು ಕಿವಿಮಾತು ಹೇಳಿದರು.

ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ವಿಭಾಗ ಸಹಪ್ರಭಾರಿಗಳಾದ ಈಶ್ವರ್ ಸಿಂಗ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಹೊಕ್ರಾಣೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X