Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 56 ಇಂಚಿನ ಎದೆಯಿರುವ ಪ್ರಧಾನಿ ಇದುವರೆಗೂ...

56 ಇಂಚಿನ ಎದೆಯಿರುವ ಪ್ರಧಾನಿ ಇದುವರೆಗೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವ ಎದೆಗಾರಿಕೆ ತೋರಿಲ್ಲ: ಬಿ.ಕೆ ಹರಿಪ್ರಸಾದ್

‘ರಣಹೇಡಿ ನಾಯಕರ ಕೈಯಲ್ಲಿ ಆಡಳಿತ ದೇಶದ ದುರಂತ’

ವಾರ್ತಾಭಾರತಿವಾರ್ತಾಭಾರತಿ17 Aug 2021 7:14 PM IST
share
56 ಇಂಚಿನ ಎದೆಯಿರುವ ಪ್ರಧಾನಿ ಇದುವರೆಗೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವ ಎದೆಗಾರಿಕೆ ತೋರಿಲ್ಲ: ಬಿ.ಕೆ ಹರಿಪ್ರಸಾದ್

ಬೆಂಗಳೂರು, ಆ.17: ಜನಸಾಮಾನ್ಯರಿಗೆ ಸರಕಾರ ಹಾಗೂ ಪ್ರಧಾನಿ ಯಾವುದೇ ಕಾರ್ಯಕ್ರಮ ತೆಗೆದುಕೊಂಡರೂ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಬೇಕು. ಆದರೆ ಕಳೆದ 7 ವರ್ಷಗಳಲ್ಲಿ 56 ಇಂಚಿನ ಎದೆ ಇರುವ ಪ್ರಧಾನಿ ನರೇಂದ್ರ ಮೋದಿ ಇದುವರೆಗೂ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುವ ಎದೆಗಾರಿಕೆ ಪ್ರದರ್ಶಿಸಿಲ್ಲ.  ಕೇಂದ್ರದಲ್ಲಿ ನಾಲ್ವರು ಸಚಿವರು ಬಿಟ್ಟರೆ ಇನ್ಯಾರೂ ಮಾತನಾಡುವುದಿಲ್ಲ. ಉಳಿದವರು ಚಿಯರ್ ಲೀಡರ್ಸ್‍ಗಳಂತೆ ಇದ್ದಾರೆ ಎಂದು ಬಿ.ಕೆ ಹರಿಪ್ರಸಾದ್ ಅವರು ವ್ಯಂಗ್ಯವಾಡಿದ್ದಾರೆ. 

 ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಹಾಗೂ ರಾಜ್ಯಸಭೆ ಸದನವನ್ನು ಸರಕಾರ ಹೇಗೆ ನಡೆಸಿದೆ ಎಂದು ದೇಶದ ಜನ ನೋಡಿದ್ದಾರೆ. ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ತಮಗೆ ಬೇಕಾದ ಕಾನೂನು ತರಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

ಸರಕಾರದ ನ್ಯೂನತೆ ತಪ್ಪುಗಳನ್ನು ಗಮನಕ್ಕೆ ತರುವುದು ವಿರೋಧ ಪಕ್ಷದ ಜವಾಬ್ದಾರಿ. ವಿರೋಧ ಪಕ್ಷದವರ ಹೇಳಿಕೆ, ಅನಿಸಿಕೆಗಳಿಗೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಾಗುತ್ತಿಲ್ಲ ಎಂದರು.

ಈ ಸರಕಾರಕ್ಕೆ 2 ವರ್ಷವಾಗಿದೆ ಮೋದಿ, ಅಮಿತ್ ಶಾ, ಗಡ್ಕರಿ, ರಾಜನಾಥ್ ಸಿಂಗ್ ಅವರನ್ನು ಬಿಟ್ಟರೆ ಉಳಿದ ಯಾವುದೇ ಸಚಿವರು ತಮ್ಮ ಸಚಿವಾಲಯದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಸರಕಾರಿ ದೂರದರ್ಶನ ಎಂಬುದು ದುಷ್ಟರ ದರ್ಶನವಾಗಿದೆ. ಜನರ ಸಂಕಷ್ಟಗಳಿಗೆ ಧ್ವನಿಯಾಗಬೇಕಿದ್ದ ದೂರ ದರ್ಶನ ಕೇವಲ ದುಷ್ಟರನ್ನೇ ತೋರಿಸುತ್ತಿದೆ ಎಂದು ಹರಿಪ್ರಸಾದ್ ಕಿಡಿಗಾರಿದರು.

ಯುಪಿಎ ಅವಧಿಯಲ್ಲಿ ಯಾವುದೇ ಮಸೂದೆ ಚರ್ಚೆಗೆ ಬಂದರೆ ಅದನ್ನು ಸಂಸದೀಯ ಸಮಿತಿ, ಜಂಟಿ ಸಮಿತಿಗಳಿಗೆ ವರ್ಗಾವಣೆ ಮಾಡಿ ವಿಸ್ತೃತವಾಗಿ ಪರಿಷ್ಕರಿಸಲಾಗುತ್ತಿತ್ತು. ಯುಪಿಎ1 ಅವಧಿಯಲ್ಲಿ ಶೇ.71ರಷ್ಟು ಮಸೂದೆ ಈ ಸಮಿತಿಗಳ ಚರ್ಚೆಗೆ ರವಾನೆಯಾಗಿತ್ತು. ಯುಪಿಎ2ರಲ್ಲಿ ಇದು ಶೇ.69ರಷ್ಟಿತ್ತು. ಎನ್ ಡಿಎ1 ಅವಧಿಯಲ್ಲಿ ಅದು ಶೇ.21ಕ್ಕೆ ಕುಸಿಯಿತು. ಈಗ ಎರಡನೇ ಅವಧಿಯಲ್ಲಿ ಶೇ.14ಕ್ಕೆ ಕುಸಿದಿದೆ. ಹೀಗಾಗಿ ಸಂಸದರು ಬೇರೆ ವಿಧಿ ಇಲ್ಲದೇ ಪ್ರತಿಭಟನೆಗೆ ಇಳಿದಿದ್ದಾರೆ ಎಂದು ಅವರು ಹೇಳಿದರು.

ಕಳೆದ ಎಂಟು ತಿಂಗಳಿಂದ ರೈತರು ಪ್ರತಿಭಟನೆ ಮಾಡುತ್ತಾ ಐನೂರಕ್ಕೂ ಹೆಚ್ಚು ರೈತರು ಪ್ರಾಣತ್ಯಾಗ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಹಾಗೂ ದೇಶದಲ್ಲಿ ಲಕ್ಷಾಂತರ ಜನ ಸತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸದನದಲ್ಲಿ ಇವರಿಗೆ ಸಂತಾಪ ಸೂಚಿಸಿಲ್ಲ. ದೇಶದ ಎಲ್ಲ ಕಡೆಗಳಲ್ಲಿ ಪ್ರಧಾನಮಂತ್ರಿಗೆ ಧನ್ಯವಾದ ಹೇಳುತ್ತಾ ಪ್ರಚಾರ ನೀಡಲಾಗುತ್ತಿದೆ. ಯಾವ ಕಾರಣಕ್ಕೆ ಅವರಿಗೆ ಧನ್ಯವಾದ ತಿಳಿಸಬೇಕು, ಅವರು ಆಕ್ಸಿಜನ್ ಕೊಟ್ಟರೆ? ಲಸಿಕೆ ಕೊಟ್ಟಿದ್ದಾರಾ? ಬೆಡ್ ಕೊಟ್ಟಿದ್ದಾರಾ? ಸತ್ತವರ ದುಃಖಕ್ಕೆ ಯಾರು ಕಾರಣ? ನರೇಂದ್ರ ಮೋದಿ ಅವರಲ್ಲವೇ? ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಸಚಿವರು ಕೋವಿಡ್ ಸಮಯದಲ್ಲಿ ಹಪ್ಪಳ ತಿನ್ನಿ, ಸಗಣಿ ಬಳಿದುಕೊಳ್ಳಿ ಎಂದು ಹೇಳುವ ಅಯೋಗ್ಯರು ಇಂದು ವಿರೋಧ ಪಕ್ಷದ ಸಂಸದರ ವಿರುದ್ಧ ದೂರು ಕೊಡುತ್ತಿದ್ದಾರೆ. ಸದನದಲ್ಲಿ ಕಾಗದ ಹರಿದರು ಎಂದು ಕಣ್ಣೀರು ಹಾಕುತ್ತಿರುವವರು, ದೇಶದಲ್ಲಿ ರೈತರು ಪ್ರತಿಭಟನೆ ಮಾಡುತ್ತಾ, ಕೋವಿಡ್ ಸೋಂಕಿನಿಂದ ಸಾಯುತ್ತಿರುವಾಗ ಕಣ್ಣೀರು ಯಾಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದರು.

ಇವರಿಗೆ ಸದನ ನಡೆಸಲು ಬರುತ್ತಿಲ್ಲ. ಆಡಳಿತ ಪಕ್ಷದ ಮೂಲ ಜವಾಬ್ದಾರಿ ಸದನ ನಡೆಸುವುದು. ಜನರ ವಿಚಾರವನ್ನು ನಾವು ನಿಮ್ಮ ಮುಂದೆ ಇಡುತ್ತೇವೆ. ಅದನ್ನು ಜಾರಿಗೊಳಿಸುವುದು ನಿಮಗೆ ಬಿಟ್ಟದ್ದು. ಆದರೆ ನೀವು ಚರ್ಚೆಗೆ ಅವಕಾಶ ಮಾಡಿಕೊಡದೆ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಸದನದ ಗೌರವ ಹಾಳು ಮಾಡಿರುವ ಕೀರ್ತಿ ಶ್ರೇಯಸ್ಸು ಮೋದಿಗೆ ಸಲ್ಲುತ್ತದೆ. ಈ ಹಿಂದೆ ಯಾವುದೇ ಪ್ರಧಾನಿ ಸದನವನ್ನು ಈ ರೀತಿಯಾಗಿ ಕಡೆಗಣಿಸಿಲ್ಲ ಎಂದು ಹರಿಪ್ರಸಾದ್ ಹೇಳಿದರು.

ಮಸೂದೆ ಹಾಗೂ ಕಾಯ್ದೆಗಳನ್ನು ಆತುರದಲ್ಲಿ ಅಂಗೀಕರಿಸಬೇಡಿ, ಅವುಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಿ ಎಂದು ಮುಖ್ಯನಾಯಾಧೀಶರು ಹೇಳಿದ್ದಾರೆ. ಹಿಂದುಳಿದ ವರ್ಗಗಳ ತಿದ್ದುಪಡಿ ಕಾಯ್ದೆಯಲ್ಲಿ ವಿಶೇಷತೆ ಏನೂ ಇಲ್ಲ. ನೀರಲ್ಲಿ ಬೆಟ್ಟು ಅದ್ದಿ, ಬಾಯಲ್ಲಿಟ್ಟುಕೊಂಡಂತಾಗಿದೆ. ಇದರಲ್ಲಿನ ತೊಡಕಿನ ಬಗ್ಗೆ ನಾನು ರಾಜ್ಯಸಭೆ ಸದಸ್ಯನಾಗಿದ್ದಾಗಲೇ ಪ್ರಶ್ನಿಸಿದ್ದೆ, ಆಗ ಮಾತು ಕೇಳದವರು ಈಗ ಮುಖ್ಯನಾಯಾಧೀಶರು ಹೇಳಿದಾಗ ಅವರಿಗೆ ಅರ್ಥವಾಗುತ್ತದೆ. ಇದರಲ್ಲಿ ಹಿಂದುಳಿದ ವರ್ಗದವರಿಗೆ ಸಿಗಬೇಕಾದ ನ್ಯಾಯಸಮ್ಮತ ಅಂಶಗಳ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹರಿಪ್ರಸಾದ್ ತಿಳಿಸಿದರು.

ಹಿರಿಯ ನಾಯಕರಾದ ಶರದ್ ಪವಾರ್ ಹಾಗೂ ದೇವೇಗೌಡರು ಯಾರ ಪರ ಮಾತನಾಡುವವರು. ಇವರು ಇಬ್ಬರಿಗೂ ಸದನ ನಡೆಸುವಂತೆ ಬುದ್ಧಿಮಾತು ಹೇಳಬಹುದಿತ್ತು, ಆ ಸರಕಾರ ಅವರ ಮಾತನ್ನು ಕೇಳಿರಲಿಕ್ಕಿಲ್ಲ. ಈ ಎಲ್ಲ ಬೆಳವಣಿಗೆ ನೋಡಿದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ದೇಶದಲ್ಲಿ ಒಂದೊಂದೇ ರಾಜ್ಯಗಳಲ್ಲಿ ಜನ ಮೋದಿ ಅವರಿಗೆ ಬುದ್ಧಿ ಕಲಿಸುತ್ತಿದ್ದಾರೆ. ಮೋದಿ ಜನಪ್ರಿಯತೆ ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯ ವಿಧಾನಸಭೆ ಸಭಾಧ್ಯಕ್ಷರು ಕೂಡ ರಾಜ್ಯಸಭೆ ಬೆಳವಣಿಗೆ ತಲೆತಗ್ಗಿಸುವಂತದ್ದು ಎಂದು ಹೇಳಿದ್ದಾರೆ, ಅವರಲ್ಲಿ ನಾನು ಹೇಳುವುದು ಒಂದೇ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪೊಲೀಸ್ ಕಮಿಷನರ್ ಅವರೇ ವಿಧಾನಸಭೆ ಒಳಗೆ ಬಂದಿದ್ದಾರೆ. ಅದು ಇತಿಹಾಸದಲ್ಲೇ ಆಗಿರಲಿಲ್ಲ. ಅದೇ ರೀತಿ ಕೇಂದ್ರ ದೇಶದಲ್ಲಿ ಮಾರ್ಷಲ್ ಆಡಳಿತ ತರಲು ಮುಂದಾಗಿದ್ದಾರಾ? ಇದು ದೇಶದ ಸಮಗ್ರತೆ ಹಾಗೂ ಐಕ್ಯತೆಗೆ ಧಕ್ಕೆಯಾಗಲಿದೆ ಎಂದು ಅವರು ತಿಳಿಸಿದರು.

ನಾಲ್ಕು ವಾರಗಳ ಕಾಲ ನಡೆದ ಸದನದಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಮೋದಿ ಪೆಗಾಸಿಸ್ ಬಗ್ಗೆ ಚರ್ಚೆ ಮಾಡಲು ಆಗಮಿಸಲಿಲ್ಲ. ಇಂತಹ ಹೇಡಿಗಳು ದೇಶದ ಅಧಿಕಾರವನ್ನು ಹಿಡಿದಿರಲಿಲ್ಲ. ಒಂದು ಕಡೆ ಮೋಹನ್ ಭಾಗವತ್ ಅವರೇ ಚೀನಾ, ನಮ್ಮ ಪ್ರದೇಶ ಅತಿಕ್ರಮಣ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅದರ ಬಗ್ಗೆ ಚರ್ಚೆ ಇಲ್ಲ. ಮತ್ತೊಂದು ಕಡೆ ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಿಲ್ಲ.  ಈ ರೀತಿ ರಣಹೇಡಿ ನಾಯಕರು ಆಡಳಿತ ನಡೆಸುತ್ತಿರುವುದು ದೇಶದ ದುರಂತ

ಬಿ.ಕೆ ಹರಿಪ್ರಸಾದ್

- ವಿಧಾನ ಪರಿಷತ್ ಸದಸ್ಯರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X