Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿದಿನ ಕನಿಷ್ಠ 10,000 ಕೋವಿಡ್...

ಪ್ರತಿದಿನ ಕನಿಷ್ಠ 10,000 ಕೋವಿಡ್ ಪರೀಕ್ಷೆ ನಡೆಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ17 Aug 2021 7:38 PM IST
share
ಪ್ರತಿದಿನ ಕನಿಷ್ಠ 10,000 ಕೋವಿಡ್ ಪರೀಕ್ಷೆ ನಡೆಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಆ.17: ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10,000 ದಿಂದ 12,000 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸೋಮವಾರ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು. ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಮ್ ಐಸೋಲೇಶನ್‌ ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್‌ಡೌನ್ ಮಾಡಿ, ಸುತ್ತಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್‌ಮೆಂಟ್ ಝೋನ್ ಎಂದು ಘೋಷಿಸಬೇಕು ಎಂದವರು ತಿಳಿಸಿದರು.

ಸೋಂಕಿತರು ಮತ್ತು ಅವರ ಸಂಪರ್ಕಿತರು ತಮ್ಮ ಮನೆಯ ವ್ಯಾಪ್ತಿಯನ್ನು ಬಿಟ್ಟು ಅನಾವಶ್ಯಕ ಸುತ್ತಾಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಿ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವಾಗ, ಜನರ ಪ್ರತಿರೋಧ ಕಂಡುಬಂದಲ್ಲಿ ಪೊಲೀಸ್ ನೆರವು ಪಡೆಯು ವಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಗಳು ಹಾಗೂ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸೋಂಕಿತರು ಕಂಡು ಬರುವ ಗ್ರಾಮಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು,ಸೋಂಕಿತರ ಮನೆಗೆ ಖುದ್ದು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ. ಅಗತ್ಯಕ್ಕನುಗುಣವಾಗಿ ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.

ಸೋಂಕಿತರನ್ನು ಕೋವಿಡ್ ಕೇರ್‌ಸೆಂಟರ್‌ಗೆ ಶೀಘ್ರದಲ್ಲಿ ಸ್ಥಳಾಂತರಿಸಲು ಅನುಕೂಲವಾಗುವಂತೆ, ಪ್ರತೀ 2 ಗಂಟೆಗೊಮ್ಮೆ ಸೋಂಕಿತರ ಮಾಹಿತಿಯನ್ನು, ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ, ಕೋವಿಡ್ ಕೇರ್ ಸೆಂಟರ್ ನಲ್ಲಿ ಈ ಹಿಂದಿನಂತೆಯೇ ಉತ್ತಮ ರೀತಿಯ ಊಟ ಮತ್ತು ಉಪಹಾರ ವ್ಯವಸ್ಥೆಯನ್ನು ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಸಂದರ್ಭದಲ್ಲಿ ಪ್ರತೀ ಪಾಸಿಟಿವ್ ಪ್ರಕರಣಕ್ಕೆ 20ಕ್ಕಿಂತ ಹೆಚ್ಚು ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಿ. ಅದರಲ್ಲಿ ಕಡ್ಡಾಯವಾಗಿ 10ಕ್ಕಿಂತ ಹೆಚ್ಚು ಪ್ರಾಥಮಿಕ ಸಂಪರ್ಕಿತರು ಇರುವಂತೆ ನೋಡಿಕೊಳ್ಳಿ. ರೈಲುಗಳ ಮೂಲಕ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಪಡೆಯಲು ನೇಮಿಸಿರುವ ಅಧಿಕಾರಿಗಳು, ನೆಗೆಟಿವ್ ವರದಿ ಇಲ್ಲದೇ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆಗೊಳಿಸಲು, ಟೆಸ್ಟಿಂಗ್, ಟ್ರೇಸಿಂಗ್ ಸೇರಿದಂತೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದ್ದು, ಈ ಬಗ್ಗೆ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X