Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಶಾಲೆಗೆ ಮಕ್ಕಳ ಸೇರ್ಪಡೆಗೆ ಉತ್ತಮ...

ಸರಕಾರಿ ಶಾಲೆಗೆ ಮಕ್ಕಳ ಸೇರ್ಪಡೆಗೆ ಉತ್ತಮ ಸ್ಪಂದನೆ: ದ.ಕ.ಜಿಲ್ಲೆಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ17 Aug 2021 8:17 PM IST
share
ಸರಕಾರಿ ಶಾಲೆಗೆ ಮಕ್ಕಳ ಸೇರ್ಪಡೆಗೆ ಉತ್ತಮ ಸ್ಪಂದನೆ: ದ.ಕ.ಜಿಲ್ಲೆಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ

ಮಂಗಳೂರು, ಆ.17: ಕೋವಿಡ್ ಮೊದಲ ಮತ್ತು ದ್ವಿತೀಯ ಅಲೆಯಿಂದ ತತ್ತರಿಸಿರುವ ಕುಟುಂಬದ ಯಜಮಾನರು ತಮ್ಮ ಮಕ್ಕಳನ್ನು ಸರ ಕಾರಿ ಶಾಲೆಗೆ ಸೇರ್ಪಡೆಗೊಳಿಸಲು ಆಸಕ್ತಿ ವಹಿಸುತ್ತಿರುವುದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನೀಡುವ ಅಂಕಿ ಅಂಶಗಳು ಸಾಕ್ಷಿಯಾಗಿವೆ.

ಅಂದರೆ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಪೈಕಿ ಉತ್ತರ ಕನ್ನಡ (ಶೇ.98.36) ಮೊದಲ ಮತ್ತು ದ.ಕ. (ಶೇ.98.10) ದ್ವಿತೀಯ ಹಾಗೂ ಚಿತ್ರದುರ್ಗ ಜಿಲ್ಲೆ (ಶೇ.98.08) ತೃತೀಯ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಶೇ.77 ಮತ್ತು ಬೆಂಗಳೂರು ದಕ್ಷಿಣ ಶೇ.76 ದಾಖಲಾತಿಯೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಒಂದೆಡೆ ಕೋರೋನ ಮೂರನೇ ಅಲೆಯ ಭೀತಿಯ ಇದೆ. ಮತ್ತೊಂದೆಡೆ ಆ.23ರಿಂದ 9ನೆ ತರಗತಿಯಿಂದ ಭೌತಿಕ ತರಗತಿ ಆರಂಭಿಸಲು ಸರಕಾರ ಮುಂದಾಗಿದೆ. ಇವೆಲ್ಲದರ ಮಧ್ಯೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ಸಿಕ್ಕಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಶಾಲೆಗೆ ಶೇ.97 ಮತ್ತು ಅನುದಾನಿತ ಶಾಲೆಗೆ ಶೇ.113ರಷ್ಟು, ಅನುದಾನ ರಹಿತ ಶಾಲೆಗಳಿಗೆ ಶೇ.93ರಷ್ಟು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಸರಕಾರಿ ಶಾಲೆಗೆ ಶೇ.101, ಅನುದಾನಿತ ಶಾಲೆಗೆ ಶೇ.107 ಮತ್ತು ಅನುದಾನ ರಹಿತ ಶಾಲೆಗೆ ಶೇ.94ರಷ್ಟು ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸರಕಾರಿ ಶಾಲೆಗೆ ಶೇ.96, ಅನುದಾನಿತ ಶಾಲೆಗೆ ಶೇ.128 ಮತ್ತು ಅನುದಾನ ರಹಿತ ಶಾಲೆಗಳಿಗೆ ಶೇ.87ರಷ್ಟು ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಕೋವಿಡ್ ಹಿನ್ನಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳ ಹೆತ್ತವರು ಖಾಸಗಿಯ ಬದಲು ಮನೆ ಸಮೀಪದ ಸರಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಅದರಲ್ಲೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ‘ಕರ್ನಾಟಕ ಪಬ್ಲಿಕ್ ಸರಕಾರಿ ಶಾಲೆ’, ಇಂಗ್ಲಿಷ್ ಶಿಕ್ಷಣವಿರುವ ಸರಕಾರಿ ಶಾಲೆಗಳಿಗೆ ದಾಖಲಾತಿಗಾಗಿ ಬೇಡಿಕೆ ಹೆಚ್ಚಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಈ ಬಾರಿಯೂ ಸರಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ನಿಗದಿಪಡಿಸಲಾದ ಗುರಿ ಮೀರಿ ಅಧಿಕ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗಿದ್ದಾರೆ. ಬೆಂಗಳೂರು ಉತ್ತರದಲ್ಲಿ ಶೇ.120ರಷ್ಟು, ವಿಜಯಪುರದಲ್ಲಿ ಶೇ.119, ಬೆಂಗಳೂರು ದಕ್ಷಿಣದಲ್ಲಿ ಶೇ.117ರಷ್ಟು ವಿದ್ಯಾರ್ಥಿಗಳು ಸರಕಾರಿ ಶಾಲೆಗೆ ಸೇರ್ಪಡೆಯಾಗಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಶೇ.112, ಉಡುಪಿ ಜಿಲ್ಲೆಯಲ್ಲಿ ಶೇ.106ರಷ್ಟು ವಿದ್ಯಾರ್ಥಿಗಳು ಒಂದನೇ ತರಗತಿಗೆ ಸರಕಾರ ಶಾಲೆಯಯಲ್ಲಿ ದಾಖಲಾತಿ ಮಾಡಿಸಿಕೊಂಡಿದ್ದಾರೆ. 1ರಿಂದ 10ನೇ ತರಗತಿವರೆಗಿನ ಸರಕಾರಿ ಶಾಲೆ ದಾಖಲಾತಿ ಅಂಕಿ ಅಂಶದಲ್ಲಿ ಉಡುಪಿ, ದ.ಕ. ಮತ್ತು ಮಂಡ್ಯ ಜಿಲ್ಲೆಯು ಶೇ.98ರಷ್ಟು ದಾಖಲಾತಿಯೊಂದಿಗೆ ಮೊದಲ ಸ್ಥಾನ ಹಂಚಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಸರಕಾರಿ ಶಾಲೆಗಳ ದಾಖಲಾತಿ ಉತ್ತಮವಾಗಿದೆ. ರಾಜ್ಯದ ಸರಕಾರಿ 45,57,511 ಸೀಟ್‌ಗಳ ಪೈಕಿ 44,53,032 (ಶೇ.97.71) ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಸರಕಾರಿ ಮಾತ್ರವಲ್ಲದೆ ಅನುದಾನಿತ ಶಾಲೆಗಳು ಕೂಡ ಮುಂದಿವೆ. ರಾಜ್ಯದಲ್ಲಿ ಅನುದಾನಿತ ಶಾಲೆಗಳಲ್ಲಿ 10,88,561 ಸೀಟ್‌ಗಳಿವೆ. ಆದರೆ ಸದ್ಯ 11,97,526 (ಶೇ.110) ವಿದ್ಯಾರ್ಥಿಗಳು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಸೇರ್ಪಡೆಗೊಂಡಿದ್ದಾರೆ. ಖಾಸಗಿ ಶಾಲೆಗಳ 46,36,386 ಸೀಟ್‌ಗಳಲ್ಲಿ 38,91,542 (ಶೇ.83.93) ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ.

ದ.ಕ.ಜಿಲ್ಲೆಯ ಸರಕಾರಿ,ಅನುದಾನಿತ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚುತ್ತಿವೆ. ನಿಗದಿತ ಗುರಿ ದಾಟುತ್ತಿವೆ. ಗ್ರಾಮೀಣ ಮಾತ್ರವಲ್ಲ ನಗರ ಪ್ರದೇಶದ ಸರಕಾರಿ ಹಾಗೂ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೂ ಉತ್ತಮ ಸ್ಪಂದನೆ ಇದೆ.
- ಮಲ್ಲೇಸ್ವಾಮಿ, ಡಿಡಿಪಿಐ, ದ.ಕ.ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X