ಉಡುಪಿ : ಆ.18ರಂದು ಲಸಿಕೆ ಲಭ್ಯತೆ ವಿವರ
ಉಡುಪಿ, ಆ.17: ಉಡುಪಿ ಜಿಲ್ಲೆಯಲ್ಲಿ ಆ.18ರಂದು ಮೊದಲ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲಭ್ಯವಿದ್ದು, ವಿವರ ಈ ಕೆಳಕಂಡಂತಿದೆ.
ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್)ಆಸ್ಪತ್ರೆಯಲ್ಲಿ ಸೆ.5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲ್ಯವಿದೆ. ಸಮಯ ಬೆಳಗ್ಗೆ 10 ರಿಂದ ಅಪರಾಹ್ನ 1 ರವರೆಗೆ
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





