ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುತ್ತೇನೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ,ಆ.17: ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ನನ್ನ ಮೇಲೆ ನಂಬಿಕೆ ಇಟ್ಟು ಗೃಹ ಖಾತೆ ಕೊಟ್ಟಿದ್ದಾರೆ.ಇದು ನನ್ನ ಜೀವನದ ಚಾಲೆಂಜ್.ಸಿಕ್ಕಿರುವ ಕಡಿಮೆ ಅವಧಿಯಲ್ಲಿ ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುತ್ತೇನೆ ಎಂದರು.
ಇಡೀ ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿದೆ. ಹೀಗಾಗಿ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದ ಅವರು,ಸೂಕ್ತವಾಗಿ ನಿಭಾಯಿಸುತ್ತೇನೆ ಎಂದರು.
ಸಮಾಜಘಾತುಕ ಶಕ್ತಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ.ಸಾಮಾನ್ಯ ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ.ಅಪರಾಧಿಗಳು ಮಾತ್ರ ಭಯ ಪಡಬೇಕು.ನಮ್ಮ ರಾಜ್ಯದಲ್ಲಿರುವ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕಳುಹಿಸಲಾಗುವುದು ಎಂದರು.
Next Story





