Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದುಳಿದ ವರ್ಗಗಳ ಎಲ್ಲಾ ಅರ್ಹ...

ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಒದಗಿಸಬೇಕು: ಜಯಪ್ರಕಾಶ್ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ17 Aug 2021 10:11 PM IST
share
ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಒದಗಿಸಬೇಕು: ಜಯಪ್ರಕಾಶ್ ಹೆಗಡೆ

ಶಿವಮೊಗ್ಗ, ಆ.17: ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನ, ಪ್ರಗತಿ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ನಮೂದಿಸುವಲ್ಲಿನ ಗೊಂದಲದ ಕುರಿತು ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 34918 ವಿದ್ಯಾರ್ಥಿಗಳಿಗೆ ಒಟ್ಟು 3.28 ಕೋಟಿ ರೂ. ವಿದ್ಯಾರ್ಥಿ ವೇತನ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 75.92 ಲಕ್ಷ ರೂ. ಬಿಡುಗಡೆಯಾಗಿದ್ದು, 7423 ವಿದ್ಯಾರ್ಥಿಗಳಿಗೆ 74.23 ಲಕ್ಷ ರೂ. ವಿದ್ಯಾರ್ಥಿ ವೇತನ ಒದಗಿಸಲಾಗಿದೆ. ಎಸ್‌ಎಸ್‌ಪಿಯಲ್ಲಿ ಸ್ವೀಕೃತವಾದ ಎಲ್ಳಾ ಅರ್ಜಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ಗೊಂದಲ ಸರಿಪಡಿಸಲು ಕ್ರಮ: ಕೆಲವು ಉಪಜಾತಿಗಳು ಪರಿಶಿಷ್ಟ ಜಾತಿ ಅಥವಾ ಪಂಗಡ ಮತ್ತು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿಯೂ ಇದ್ದು, ಅಂತಹ ಜಾತಿಗಳ ಪಟ್ಟಿಯನ್ನು ಸರಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದರಿಂದಾಗಿ ಜಾತಿ ಪ್ರಮಾಣ ಪತ್ರ ನೀಡಲು ತೊಡಕುಂಟಾಗುತ್ತಿದ್ದು, ಸರಿಯಾದ ಜಾತಿ ಪ್ರಮಾಣ ಪತ್ರ ದೊರೆಯದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ.

ಎರಡು ಪಟ್ಟಿಯಲ್ಲಿರುವ 17 ಜಾತಿಗಳನ್ನು ಆಯೋಗ ಗುರುತಿಸಿದೆ. ಇದೇ ರೀತಿ ಉಪ ಜಾತಿಗಳ ಬಗ್ಗೆಯೂ ಕೆಲವು ಗೊಂದಲಗಳಿದ್ದು, ಈ ಕುರಿತು ಆಯೋಗ ಸುದೀರ್ಘವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಕೆಲವು ಸಣ್ಣ ಜಾತಿಗಳಿಗೆ ಮೀಸಲಾತಿಯಲ್ಲಿ ಸೇರಿರುವ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದಿರುವ ಕಾರಣ ಫಲಾನುಭವವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಸಮಸ್ಯೆ ಕುರಿತು ಚರ್ಚಿಸಲು ಪ್ರತ್ಯೇಕ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಮಾತನಾಡಿ, ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ನಿರ್ವಹಣೆಗಾಗಿ ೧೦ ಕೋಟಿ ರೂ. ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಕೆಲವು ವಿದ್ಯಾರ್ಥಿ ನಿಲಯಗಳು ಸೋರುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹ ವಿದ್ಯಾರ್ಥಿ ನಿಲಯಗಳನ್ನು ಗುರುತಿಸಿ ದುರಸ್ತಿಗಾಗಿ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧ್ಯಕ್ಷರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಆಯೋಗದ ಸದಸ್ಯರಾದ ಕಲ್ಯಾಣ್ ಕುಮಾರ್, ಬಿ.ಎಸ್.ರಾಜಶೇಖರ್, ಕೆ.ಟಿ.ಶಿವಣ್ಣ, ಅರುಣ್ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X