Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ವಿವಿಯಲ್ಲಿ ಓದುತ್ತಿರುವ...

ಮೈಸೂರು ವಿವಿಯಲ್ಲಿ ಓದುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಭಯ ನೀಡಿದ ಕುಲಪತಿ ಪ್ರೊ.ಜೆ.ಹೇಮಂತ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Aug 2021 10:14 PM IST
share
ಮೈಸೂರು ವಿವಿಯಲ್ಲಿ ಓದುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಭಯ ನೀಡಿದ ಕುಲಪತಿ ಪ್ರೊ.ಜೆ.ಹೇಮಂತ್ ಕುಮಾರ್

ಮೈಸೂರು,ಆ.17: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದಿದ್ದು ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘನ್ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಯ ನೀಡಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ, ಕುಲಸಚಿವರನ್ನು ಭೇಟಿ ಮಾಡಿದ ಆಫ್ಘನ್ ವಿಧ್ಯಾರ್ಥಿಗಳು, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಅಫ್ಘನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್, 'ಅಫ್ಘಾನಿಸ್ತಾನದಲ್ಲಿ ಏನಾಗಿದೆಯೋ ಅದಾಗಿದೆ. ಅದನ್ನ ನಿಯಂತ್ರಿಸಲು ನಾವ್ಯಾರು ಅಲ್ಲ. ಆದರೆ ನಮ್ಮ ವಿದ್ಯಾರ್ಥಿಗಳ ರಕ್ಷಣೆಗೆ ಶಕ್ತಿಮೀರಿ ಪ್ರಯತ್ನ ಮಾಡುತ್ತೇವೆ. ವಿಶ್ವವಿದ್ಯಾನಿಲಯದಲ್ಲಿ ನೀವು ಇರುವವರೆಗೂ ನಾವು ನಿಮ್ಮ ಪೋಷಕರಂತೆ. ನಿಮ್ಮ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ. ವೀಸಾ ಅವಧಿ ಮುಗಿಯುವವರೆಗೂ ವಿದ್ಯಾಭ್ಯಾಸದ ಮೇಲೆ ಗಮನಕೊಡಿ. ವೀಸಾ ವಿಸ್ತರಣೆ ಅಗತ್ಯವಿದ್ದರೆ ಸಂಬಂಧಪಟ್ಟವರೊಂದಿಗೆ ನಾವೇ ಚರ್ಚೆ ಮಾಡಿ ತಿಳಿಸುತ್ತೇವೆ' ಎಂದು ಹೇಳಿದರು.

ಮೈಸೂರು ವಿವಿ ಕುಲಪತಿ ಹೇಮಂತ್ ಕುಮಾರ್  ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಅಫ್ಘಾನ್ ವಿದ್ಯಾರ್ಥಿಗಳು, 'ನಾವು ಭಾರತದಲ್ಲಿ ಕ್ಷೇಮವಾಗಿದ್ದರೂ ನಮ್ಮ ಚಿತ್ತ ಮಾತ್ರ ಆಫ್ಘಾನಿಸ್ತಾನದ ಭೀತಿ ಮೇಲಿದೆ. ನಾವು ಕುಟುಂಬಸ್ಥರೊಂದಿಗೆ ಮಾತನಾಡಿದ್ದೇವೆ. ಅವರು ಹೇಳುತ್ತಿರುವುದು ಒಂದೇ ? ಓದನ್ನು ಬಿಡಬೇಡಿ ನಮ್ಮ ಬಗ್ಗೆ ಹೆಚ್ಚು ಚಿಂತಿಸಬೇಡಿ. ಸದ್ಯಕ್ಕೆ ನಾವು ಕ್ಷೇಮವಾಗಿದ್ದೇವೆ ಎನ್ನುತ್ತಿದ್ದಾರೆ. ಅಲ್ಲಿ ನಮ್ಮ ಕುಟುಂಬಸ್ಥರು ಮನೆಯಿಂದ ಹೊರ ಬಾರದ ಸ್ಥಿತಿ ಉಂಟಾಗಿದೆ. ಮಹಿಳೆಯರ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಶೀಘ್ರದಲ್ಲೇ ಅಶಾಂತಿಯ ವಾತಾವರಣ ಸರಿಯಾಗುವ ಭರವಸೆ ಇದೆ' ಎಂದರು.

'ಜಾಗತಿಕ ಸಮುದಾಯ ಅಫ್ಘಾನ್ ಪರವಾಗಿ ಮಾತನಾಡಬೇಕು. ಭಾರತದಲ್ಲಿ ವಿದ್ಯಾರ್ಥಿಗಳಿಗೆ ಕೆಲವೇ ತಿಂಗಳಲ್ಲಿ ವೀಸಾ ಅವಧಿ ಮುಗಿಯಲಿದ್ದು, ಭಾರತ ನಮ್ಮ ನೆರವಿಗೆ ಬರಲಿದೆ ಎಂಬ ವಿಶ್ವಾಸವಿದೆ. ಮೈಸೂರು ವಿವಿ ನಮ್ಮ ಕುಟುಂಬದಂತೆ ಇರಲಿದೆ ಎಂಬ ಭರವಸೆ ನೀಡಿದೆ. ಮೈಸೂರು ವಿವಿಯಿಂದ ನಮಗೆ ನೈತಿಕ ಬೆಂಬಲ ದೊರೆತಿದೆ. ಹೀಗಾಗಿ ಭಾರತ ಹಾಗೂ ಮೈಸೂರು ವಿವಿಗೆ ಧನ್ಯವಾದಗಳನ್ನ ಅರ್ಪಿಸುವುದಾಗಿ' ಅಫ್ಘನ್ ವಿದ್ಯಾರ್ಥಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X