ಡಾ.ಕಾತ್ಯಾಯಿನಿ ಕುಂಜಿಬೆಟ್ಟುಗೆ ಮಯೂರವರ್ಮ ಪ್ರಶಸ್ತಿ
![ಡಾ.ಕಾತ್ಯಾಯಿನಿ ಕುಂಜಿಬೆಟ್ಟುಗೆ ಮಯೂರವರ್ಮ ಪ್ರಶಸ್ತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟುಗೆ ಮಯೂರವರ್ಮ ಪ್ರಶಸ್ತಿ](https://www.varthabharati.in/sites/default/files/images/articles/2021/08/18/303165-1629301527.jpg)
ಉಡುಪಿ, ಆ.18: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ 2021ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.
ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿರುವ 45 ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿಯು 25,000 ರೂ.ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story