Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆ ಪುನಾರಂಭಕ್ಕೆ ಸಿದ್ಧತೆ ಪೂರ್ಣ:...

ಶಾಲೆ ಪುನಾರಂಭಕ್ಕೆ ಸಿದ್ಧತೆ ಪೂರ್ಣ: ಸಚಿವ ಬಿ.ಸಿ ನಾಗೇಶ್

ವಾರ್ತಾಭಾರತಿವಾರ್ತಾಭಾರತಿ18 Aug 2021 9:30 PM IST
share
ಶಾಲೆ ಪುನಾರಂಭಕ್ಕೆ ಸಿದ್ಧತೆ ಪೂರ್ಣ: ಸಚಿವ ಬಿ.ಸಿ ನಾಗೇಶ್

ಬೆಂಗಳೂರು, ಆ. 18: ಆ.23ರಿಂದ ಪ್ರೌಢಶಾಲೆ 9 ಮತ್ತು 10ನೇ ತರಗತಿಗಳು ಪುನಾರಂಭ ಮಾಡಲು ಸಂಪೂರ್ಣ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಶಾಲೆ ಪುನಾರಂಭದ ಪೂರ್ವಸಿದ್ಧತೆ ಪರಿಶೀಲನೆಗೆ ಬುಧವಾರ (ಆ.18) ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಿಡಿಯೊ ಕಾನ್ಫ್‌ರೆನ್ಸ್ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆಗೆ ಸಚಿವರು  ಸಭೆ ನಡೆಸಿದರು.
'ಶಾಲೆ ಆವರಣದಲ್ಲಿ ಶುಚಿತ್ವ ಅತಿ ಮುಖ್ಯ. ಶೌಚಗೃಹ, ಶಾಲಾ ಆವರಣ, ಕೊಠಡಿಗಳು ಸೇರಿದಂತೆ ಎಲ್ಲ ಕಡೆ ಶುಚಿತ್ವ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ. ಶುಚಿತ್ವ ಮತ್ತು ಸುರಕ್ಷತೆ ನಿರಂತರವಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ' ಎಂದು ಅಧಿಕಾರಿಗಳಿಗೆ ಸಚಿವರು ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು.

‘ಶಾಲೆ ಕೊಠಡಿಗಳು, ಆವರಣ, ಶೌಚಗೃಹ ಸೇರಿದಂತೆ ಕೊಠಡಿಗಳು, ಬೆಂಚುಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಜ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ಕುರಿತು ಶಿಕ್ಷಕರಿಗೆ ಮಾಹಿತಿಯನ್ನು ನೀಡಿ ತಿಳಿ ಹೇಳಲಾಗಿದೆ. ಮಕ್ಕಳು ಸಹಿತ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ’ ಎಂದು ಸಚಿವರು ಹೇಳಿದರು.

‘ಮಕ್ಕಳಿಗೆ ಕುಡಿಯಲು ಬಿಸಿ ನೀರು ಒದಗಿಸಬೇಕು. ಸಾಧ್ಯವಾದರೆ ಮಕ್ಕಳೇ ಮನೆಯಿಂದ ಬಿಸಿ ನೀರು ತಂದುಕೊಂಡರೆ ಉತ್ತಮ. ಕೆಲವು ದಿನಗಳಲ್ಲಿ ಈ ಎಲ್ಲ ವಿಚಾರಗಳು ಸರಿ ಹೋಗುತ್ತವೆ. ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳು ಪರಿಪಾಲನೆಯಾಗುತ್ತಿರುವ ಕುರಿತು ಬಿಇಒಗಳು ತಮ್ಮ ವ್ಯಾಪ್ತಿಯ ಕನಿಷ್ಠ ಶೇ.50ರಷ್ಟು ಶಾಲೆಗಳಿಗಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಒಂದು ವೇಳೆ ಕೊಠಡಿ ಕೊರತೆಯಾದರೆ ಸಿಬ್ಬಂದಿ ಕೊಠಡಿ ಬಳಸಿಕೊಳ್ಳಬೇಕು. ಈ ಮೂಲಕ ಶಾಲೆಗಳು ಪುನಾರಂಭ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಶಾಲೆಗೆ ಬರಲು ಮಕ್ಕಳು ಉತ್ಸುಕ

ಶಾಲೆ ಆರಂಭಿಸಲು ಮಕ್ಕಳು ಮತ್ತು ಪಾಲಕರ ಅಭಿಪ್ರಾಯವನ್ನು ಬಿಇಒಗಳು ಸಂಗ್ರಹಿಸಿದ್ದು, ‘ಪಾಲಕರು ಶಾಲೆ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ. ಮಕ್ಕಳು ಕೂಡ ಆಸಕ್ತಿ ತೋರಿಸುತ್ತಿದ್ದಾರೆ. ಒಂದುವರೆ ವರ್ಷದಿಂದ ಭೌತಿಕ ಶಿಕ್ಷಣ ಸಿಗದೆ ಮಕ್ಕಳು ಬೇಸರಗೊಂಡಿದ್ದಾರೆ. ಮಕ್ಕಳನ್ನು ಕಳುಹಿಸುತ್ತೇವೆ. ಬೇಗ ಆರಂಭಿಸಿ ಎಂದು ಕೇಳುತ್ತಿದ್ದಾರೆ’ ಎಂದು ಸಚಿವರು ತಿಳಿಸಿದರು.

‘ಮಕ್ಕಳ ಪಾಲಕರು ಮತ್ತು ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಲಸಿಕೆ ಪಡೆಯದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬಹುದೇ ಎಂದು ಕೇಳುತ್ತಿದ್ದಾರೆ. ಆದರೆ, ಅದಕ್ಕೆ ಅವಕಾಶ ನೀಡಲಾಗದು. ಲಸಿಕೆ ಪಡೆಯಲು ಇನ್ನೂ ಸಮಯಾವಕಾಶ ಇದೆ. ಲಸಿಕೆ ಲಭ್ಯತೆ ಇರುವ ಕಾರಣ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಕೋವಿಡ್-19ನಿಂದ ಸುರಕ್ಷತೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಇಲಾಖೆಯಿಂದ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಸಚಿವರು ಬಿಇಒಗಳಿಗೆ ಸೂಚಿಸಿದರು.

8, 9ನೇ ತರಗತಿಗಳು ಮತ್ತು ಪಿಯು ಕಾಲೇಜು ಆರಂಭಿಸಿದ ಬಳಿಕ ಬರುವ ಪ್ರತಿಕ್ರಿಯೆಗಳು 1ರಿಂದ 8ನೇ ತರಗತಿವರೆಗಿನ ಶಾಲೆ ಪುನಾರಂಭಿಸಲು ನೆರವಾಗುತ್ತವೆ. ಹೀಗಾಗಿ, ರಾಜ್ಯದ ಎಲ್ಲ ಗ್ರಾಮ, ಪಟ್ಟಣ, ತಾಲೂಕು, ನಗರಗಳಲ್ಲಿ ವಯೋಮಿತಿ ಸಹಿತ ಕೋವಿಡ್ ಪ್ರಕರಣಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಈ ಮಾಹಿತಿ ಸಂಗ್ರಹಿಸುವುದರಿಂದ ಮಕ್ಕಳಲ್ಲಿ ಕೋವಿಡ್ ಪ್ರಮಾಣ ಎಷ್ಟಿದೆ ಎಂಬುದರ ಚಿತ್ರಣ ಸಿಗುತ್ತದೆ. ಆರೋಗ್ಯ ಇಲಾಖೆಯಲ್ಲಿ ಈ ಮಾಹಿತಿ ಇದ್ದು, ಅದನ್ನು ಸಂಗ್ರಹಿಸಿ ಅಧ್ಯಯನ ಮಾಡಿದರೆ 1ರಿಂದ 8ನೇ ತರಗತಿ ಶಾಲೆ ಆರಂಭಿಸಲು ಸೂಕ್ತ ಸಿದ್ಧತೆ ಮತ್ತು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ನೆಟ್‌ವರ್ಕ್ ಸಮಸ್ಯೆ, ಮೊಬೈಲ್, ಲ್ಯಾಪ್‌ಟಾಪ್ ಕೊರತೆ ಕಾರಣ ಗ್ರಾಮಾಂತರ ಪ್ರದೇಶಗಳಲ್ಲಿ ಸಾಕಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಾಲ ಕಾರ್ಮಿಕರಾಗಿ ಕೆಲಸ ಮಾಡಿದ್ದಾರೆ. ವಿವಾಹವಾಗಿದ್ದಾರೆ ಎಂಬ ಮಾಹಿತಿ ಹಲವು ಸರ್ವೇಗಳಿಂದ ಬೆಳಕಿಗೆ ಬಂದಿದೆ. ಮಕ್ಕಳ ಶೈಕ್ಷಣಿಕ ಜೀವನ ಹಾಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ. ಯಾರಾದರೂ ಪಾಲಕರು ಹಿಂಜರಿದರೆ ಅವರೊಂದಿಗೆ ಮಾತನಾಡಿ ಧೈರ್ಯ ತುಂಬಿ ಮಕ್ಕಳನ್ನು ಶಾಲೆಗೆ ಕರೆತರುವಂತೆ ಮನವರಿಕೆ ಮಾಡಿಕೊಡಬೇಕು’ ಎಂದು ಬಿಇಒಗಳಿಗೆ ಸಚಿವರು ಸೂಚಿಸಿದರು.

ಶಿಕ್ಷಕರ ಬೇಡಿಕೆ ಈಡೇರಿಸುವ ಪ್ರಯತ್ನ:

ಶಿಕ್ಷಕರ ವೇತನ, ಭಡ್ತಿ ಸೇರಿದಂತೆ ಇನ್ನಿತರ ಬೇಡಿಕೆಗಳಿಗೆ ಮುಂಬರುವ ‘ಶಿಕ್ಷಕರ ದಿನಾಚರಣೆ’ ಒಳಗಾಗಿ ಧನಾತ್ಮಕವಾಗಿ ಸ್ಪಂದಿಸಬೇಕು ಎಂಬ ಆಸೆ ನನಗಿದೆ. ಬೇಡಿಕೆಗಳನ್ನು ನನ್ನ ಗಮನಕ್ಕೆ ತಂದರೆ ಈಡೇರಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X