ಉಡುಪಿಯಲ್ಲಿ ಮರಳು ಲಭ್ಯ
ಉಡುಪಿ, ಆ.19: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವರಾಹಿ ಮತ್ತು ಸೌಪರ್ಣಿಕ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಈ ಮರಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ವಿತರಿಸುವ ಕಾರ್ಯ ಪ್ರಾರಂಭ ಗೊಳ್ಳಲಿದೆ. ಮರಳು ಅವಶ್ಯಕತೆ ಇರುವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಪಡೆಯಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂಜ್ಞಾನ ಇಲಾಖೆ, ಉಡುಪಿ ಜಿಲ್ಲೆ, ದೂರವಾಣಿ ಸಂಖ್ಯೆ: 0820-2572333ನ್ನು ಸಂಪರ್ಕಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಕಟಣೆ ತಿಳಿಸಿದೆ.
Next Story