ಜಮ್ಮು-ಕಾಶ್ಮೀರ: ಎನ್ಕೌಂಟರ್ ನಲ್ಲಿ ಮೂವರು ಉಗ್ರರು ಹತ

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ತ್ರಾಲ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಭಯೋತ್ಪಾದಕರ ಗುರುತು ತಕ್ಷಣವೇ ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಹಾಗೂ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಅಥವಾ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.
ಕಳೆದ 24 ಗಂಟೆಗಳಲ್ಲಿ ತ್ರಾಲ್‌ನಲ್ಲಿ ಭದ್ರತಾ ಪಡೆಗಳ ಎರಡನೇ ಹಾಗೂ ಗುರುವಾರದಿಂದ ಮೂರನೆಯ ಕಾರ್ಯಾಚರಣೆ ಇದಾಗಿದೆ.
ಶುಕ್ರವಾರ ಇಬ್ಬರು ಭಯೋತ್ಪಾದಕರನ್ನು ಶ್ರೀನಗರ ಸಮೀಪದ ಖ್ರೆವ್ ನಲ್ಲಿ ಹತ್ಯೆ ಮಾಡಲಾಗಿದೆ.
ರಾಜೌರಿ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದರು. ಆ ಘಟನೆಯಲ್ಲಿ ಒಬ್ಬ ಭಯೋತ್ಪಾದಕ ಕೂಡ ಸಾವನ್ನಪ್ಪಿದ್ದಾನೆ.
Next Story





