ಸರಗಳ್ಳತನ: ಮೂವರು ಆರೋಪಿಗಳ ಬಂಧನ, 52 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳು ವಶ
ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

ಬೆಂಗಳೂರು, ಆ.21: ನಗರದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರ ಕಳ್ಳತನ ಮಾಡಿ ಹೊರರಾಜ್ಯ/ಜಿಲ್ಲೆಗಳಲ್ಲಿ ವಿಲೇವಾರಿ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಅವರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ಒಂಟಿ ಮಹಿಳೆಯರನ್ನು ಹಾಗೂ ವೃದ್ಧೆಯರನ್ನು ಗುರಿಯಾಗಿಸಿಕೊಂಡು ಸರಕಳ್ಳತನ ಮಾಡುತ್ತಿದ್ದ ಬಂಧಿತ ಮೂವರು ಆರೋಪಿಗಳಿಂದ 52 ಲಕ್ಷ ರೂ. ಮೌಲ್ಯದ 1 ಕೆಜಿ 090 ಗ್ರಾಂ ತೂಕದ 18 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು 2016ನೇ ಇಸವಿಯಿಂದ ಬೆಂಗಳೂರಿನ ಹಲವಾರು ಸ್ಥಳಗಳಲ್ಲಿ ಸರಗಳ್ಳತನ ಪೊಲೀಸರ ಕೈಗೆ ಸಿಗದ ತಲೆಮರೆಸಿಕೊಂಡಿದ್ದರು. ಬಂಧಿತ ಆರೋಪಿಗಳು ನೀಡಿದ ಮಾಹಿತಿಯಂತೆ ತಮಕೂರು ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅವರು ಮಾರಾಟ ಮಾಡಿದ್ದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





