ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಕುಂವಿ, ವೈದೇಹಿ ಆಯ್ಕೆ

ಕುಂ.ವೀರಭದ್ರಪ್ಪ
ಬೆಂಗಳೂರು, ಆ.21: ಬೆಳಗಾವಿಯ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನದಿಂದ ನೀಡಲಾಗುವ 2021-21ನೇ ಸಾಲಿನ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಹಿರಿಯ ಸಾಹಿತಿಗಳಾದ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ(ಕಾವ್ಯ), ಕುಂ.ವೀರಭದ್ರಪ್ಪ(ಕತೆ) ಹಾಗೂ ವೈದೇಹಿ(ಕಾದಂಬರಿ) ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ 50ಸಾವಿರ ರೂ.ನಗದು, ಪ್ರಶಸ್ತಿಯನ್ನು ಒಳಗೊಂಡಿದೆ. ಸೆ.5ರಂದು ಧಾರವಾಡದ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ, ಚಿಂತಕ ಡಾ.ಗುರುಲಿಂಗ ಕಾಪಸೆಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನನದ ಅಧ್ಯಕ್ಷ ಪ್ರೊ.ರಾಘವೇಂದ್ರ ಪಾಟೀಲ್ ತಿಳಿಸಿದ್ದಾರೆ.
Next Story





