ಆ.23: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಂಗಳೂರಿಗೆ
![ಆ.23: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಂಗಳೂರಿಗೆ ಆ.23: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಂಗಳೂರಿಗೆ](https://www.varthabharati.in/sites/default/files/images/articles/2021/08/21/303521-1629556598.jpg)
ಮಂಗಳೂರು, ಆ.21: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆ.23ರಂದು ಸಂಜೆ 3 ಗಂಟೆಗೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ರಕ್ಷಾರಾಮಯ್ಯ, ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಭಾಗವಹಿಸಲಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜ, ಪಿ.ವಿ ಮೋಹನ್, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಡಾ.ರಘು ಸುಳ್ಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ತಿಳಿಸಿದ್ದಾರೆ.