Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ 3ನೇ ಅಲೆ ಹಿನ್ನೆಲೆ ತೀವ್ರ...

ಕೋವಿಡ್ 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Aug 2021 8:23 PM IST
share
ಕೋವಿಡ್ 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ

ವಿಜಯಪುರ, ಆ.21: ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚೆಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶನಿವಾರ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಕೋವಿಡ್ 19 ಮೂರನೇ ಅಲೆಯ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್ಪೋಸ್ಟ್ ಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಆಗಮಿಸುವ ನಾಗರಿಕರ ಬಗ್ಗೆ ತೀವ್ರ ನಿಗಾ ಇಟ್ಟು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಿರಂತರ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಕೋವಿಡ್ 19 ಲಸಿಕೆಗಳ ಸರಬರಾಜು ಹೆಚ್ಚಿಸಲು ಪ್ರಯತ್ನಿಸಲಾಗುವುದು. ವಿಶೇಷವಾಗಿ ಈ ಎರಡೂ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿ ದಿನಕ್ಕೆ ತಲಾ 25 ಸಾವಿರ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೋವಿಡ್ 19 ಮೂರನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಬೆಡ್‍ಗಳನ್ನು ಮೀಸಲಿಡಬೇಕು. ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನ ಇಟ್ಟು,  ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಅವರು ಹೇಳಿದರು.

ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹಾಗೂ ಅಪೌಷ್ಟಿಕತೆ ಕೊರತೆ ನೀಗಿಸಲು ಗಮನ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಿನ ರೀತಿಯಲ್ಲಿ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚ ಸರಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಕೋವಿಡ್ 19 ಮೊದಲ ಹಾಗೂ 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, 3ನೇ ಅಲೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಸೂಚನೆ ನೀಡಿದರು.

ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ದೊರಕಿಸಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ 22 ಕೋಟಿ ರೂ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್, ಸಚಿವರಾದ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಸಿ.ಸಿ.ಪಾಟೀಲ್, ಶಾಸಕರಾದ ಶಿವಾನಂದ ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್, ಎ.ಎಸ್.ಪಾಟೀಲ್, ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ, ಕೆಎಸ್ರ್ಸಾಟಿಸಿ ಎಂಡಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X