ಉಡುಪಿ ಜಿಲ್ಲೆಯಲ್ಲಿ ಸದ್ಯ ಶಾಲೆ ಪ್ರಾರಂಭವಿಲ್ಲ: ಡಿಸಿ ಜಿ.ಜಗದೀಶ್

ಉಡುಪಿ, ಆ.21: ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಹೆಚ್ಚಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆಗಳು ಪ್ರಾರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುರಿತು ಪ್ರಶ್ನಿಸಿದಾಗ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸದ್ಯ ಶಾಲೆ ಆರಂಭಿಸುವುದಿಲ್ಲ ಎಂದರು.
ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.2.5 ಇದೆ. ಅದು ಶೇ.2ಕ್ಕಿಂತ ಕೆಳಗಿಳಿದ ಬಳಿಕವೇ ಶಾಲೆಗಳನ್ನು ತೆರೆಯುವ ಬಗ್ಗೆ ಪರಿಶೀಲಿಸುತ್ತೇವೆ ಎಂದವರು ಮಾಹಿತಿ ನೀಡಿದರು.
Next Story





