ಉಡುಪಿ: ಕೋವಿಡ್‌ಗೆ 177 ಮಂದಿ ಪಾಸಿಟಿವ್

ಉಡುಪಿ, ಆ.21: ಜಿಲ್ಲೆಯಲ್ಲಿ ಶನಿವಾರ 177 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿ ಯಾಗಿಲ್ಲ. 99 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯ ರಾಗಿರುವವರ ಸಂಖ್ಯೆ 1499ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಕೊರೋನ ಸೋಂಕು ದೃಢಪಟ್ಟ 177 ಮಂದಿಯಲ್ಲಿ 93 ಮಂದಿ ಪುರುಷರು ಹಾಗೂ 84 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 92 ಮಂದಿ ಉಡುಪಿ ತಾಲೂಕು, 35 ಮಂದಿ ಕುಂದಾಪುರ ಹಾಗೂ 50ಮಂದಿ ಕಾರ್ಕಳ ತಾಲೂಕಿನವರು. ಇಂದು ಪಾಸಿಟಿವ್ ಬಂದವರಲ್ಲಿ 32 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 145 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶುಕ್ರವಾರ 99 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 70,721ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7905 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 72,658ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,86,053 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಓರ್ವ ಬಿಡುಗಡೆ: ಜಿಲ್ಲೆಯಲ್ಲಿ ಇಂದು ಹೊಸದಾಗಿ ಯಾರೂ ಬ್ಲ್ಯಾಕ್ ಫಂಗಸ್ ಸೋಂಕಿನ ಚಿಕಿತ್ಸೆಗೆ ದಾಖಲಾಗಿಲ್ಲ. ಚಿಕಿತ್ಸೆ ಪಡೆಯುತಿದ್ದ ಒಬ್ಬರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, ಸದ್ಯ ಹೊರಜಿಲ್ಲೆಗಳ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
11,233 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಶನಿವಾರ 11,233 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ 6514 ಮಂದಿಗೆ ಮೊದಲ ಡೋಸ್ ಹಾಗೂ 4719 ಮಂದಿಗೆ ಎರಡನೇ ಡೋಸ್‌ನ್ನು ನೀಡ ಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44 ವರ್ಷದೊಳಗಿನ 4988 ಮಂದಿ ಮೊದಲ ಹಾಗೂ 2063 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 1526 ಮಂದಿಗೆ ಮೊದಲ ಹಾಗೂ 2656 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆಯಾಗಿ ಜಿಲ್ಲೆಯ 6,03,981 ಮಂದಿಗೆ ಮೊದಲ ಡೋಸ್ ಹಾಗೂ 2,25,038 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.







