ವಿಜ್ಞಾನ ರಾ.ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ವಿತರಣೆ

ಉಡುಪಿ, ಆ.21: ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ‘ಶಾಲಾ ಮಕ್ಕಳ ಸಿಎಸ್‌ಐಆರ್ ಅನ್ವೇಷಕ ಪ್ರಶಸ್ತಿ-2021’ ಸ್ಪರ್ಧೆಯಲ್ಲಿ ನಾಲ್ಕನೇ ಪ್ರಶಸ್ತಿ ಪಡೆದ ಕುಂದಾಪುರ ತಾಲೂಕು ಅಲ್ಬಾಡಿ ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಾದ ಅನುಷಾ ಮತ್ತು ರಕ್ಷಿತಾ ನಾಯ್ಕಾ ಇವರನ್ನು ಮಣಿಪಾಲದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಬ್ಬರ ಸಾಧನೆಯನ್ನು ಗುರುತಿಸಿ ಇಲಾಖೆ ನೀಡಿದ ಅಭಿನಂದನಾ ಪತ್ರ ಹಾಗೂ ತಲಾ 10 ಸಾವಿರ ರೂ. ಗಳ ಡಿಮಾಂಡ್ ಡ್ರಾಪ್ಟ್‌ನ್ನು ವಿದ್ಯಾರ್ಥಿನಿಯರ ಪೋಷಕರು ಹಾಗೂ ಶಾಲಾ ಶಿಕ್ಷಕ ವೃಂದದ ಸಮ್ಮುಖದಲ್ಲಿ ವಿತರಿಸಲಾಯಿತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Story





