Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಸರಕಾರಕ್ಕೆ ಕಣ್ಣಿಲ್ಲ ಎಂಬುದು ಮತ್ತೆ...

ಈ ಸರಕಾರಕ್ಕೆ ಕಣ್ಣಿಲ್ಲ ಎಂಬುದು ಮತ್ತೆ ಸಾಬೀತು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Aug 2021 10:56 PM IST
share
ಈ ಸರಕಾರಕ್ಕೆ ಕಣ್ಣಿಲ್ಲ ಎಂಬುದು ಮತ್ತೆ ಸಾಬೀತು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.21: ಬದುಕಿರುವ ಯೋಧನ ಮನೆಗೆ ಹೋಗಿ ಕೇಂದ್ರ ಸಚಿವರು ಸಾಂತ್ವನ ಹೇಳಿರುವುದು ಬಿಜೆಪಿ ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಶನಿವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸಚಿವ ನಾರಾಯಣ ಸ್ವಾಮಿ ಅವರಿಗೆ ಅಧಿಕಾರ ಸಿಕ್ಕಿದೆ, ಆ ಬಗ್ಗೆ ನಮ್ಮ ತಕರಾರಿಲ್ಲ. ಅವರು ಬದುಕಿರುವ ಯೋಧನ ಮನೆಗೆ ಹೋಗಿ ಸಾಂತ್ವನ ಹೇಳಿರುವ ಸುದ್ದಿ ನೋಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್, ಕಾರ್ಯಕರ್ತರು ಏನು ಮಾಡುತ್ತಿದ್ದರು? ಅವರು ಯಾವ ಮಾಹಿತಿ ಕೊಟ್ಟರು? ಕೇಂದ್ರ ಸಚಿವರು ಏಕಾಏಕಿ ಪ್ರವಾಸ ಮಾಡುವುದಿಲ್ಲ ಎಂದರು.

ಸರಕಾರ ಸಂಪೂರ್ಣವಾಗಿ ಕುರುಡಾಗಿದೆ. ಒಬ್ಬ ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ ನೀಡಿದರೆ ಅವರು ಅತಿಥಿ ಇದ್ದಂತೆ. ಅವರು ಎಲ್ಲೇ ಹೋದರೂ, ಅವರ ಜೊತೆ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಆದರೂ ಈ ರೀತಿ ಯಡವಟ್ಟು ಆಗಿರುವುದು ಈ ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಿವಕುಮಾರ್ ಹೇಳಿದರು.

ದೊಡ್ಡ ನಾಯಕರೆಂದು ಬಿಂಬಿಸಿಕೊಳ್ಳಲು ಕೆಲವರು ಮಾತನಾಡುತ್ತಾರೆ: 'ರಾಜಕಾರಣ ಏನೇ ಇರಲಿ, ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದವರು. ಅವರ ಬಗ್ಗೆ ನಾವು ಎಂದಿಗೂ ಕೇವಲವಾಗಿ ಮಾತನಾಡಿಲ್ಲ.' 'ಬೆಂಗಳೂರಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನೆಹರೂ ಹಾಗೂ ವಾಜಪೇಯಿ ಅವರ ವಿಚಾರವಾಗಿ ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಯಾರೂ ಅಲ್ಲಗಳೆದಿಲ್ಲ. ಕೆಲವರು ತಾನು ದೊಡ್ಡ ನಾಯಕ ಎಂದು ಪ್ರಚಾರ ಪಡೆಯಲು ಮಾತನಾಡುತ್ತಿದ್ದಾರೆ, ಮಾತನಾಡಲಿ ಬಿಡಿ.' ಎಂದು ಅವರು ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಸ್ವದೇಶಕ್ಕೆ ಕರೆತರುವುದು ಭಾರತ ಸರಕಾರದ ಜವಾಬ್ದಾರಿಯಾಗಿದೆ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X