ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ

ಬೆಂಗಳೂರು, ಆ.21: ವಿವಾದಾತ್ಮಕತೆಯೇ ನಾಯಕತ್ವದ ಗುಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಬೆನ್ನು ತಟ್ಟಿಕೊಂಡ ಮೇಲೆ ವಿನಯ್ ಕುಲಕರ್ಣಿ ಅವರಂಥಹ ಕೊಲೆ ಆರೋಪಿಗೆ ಭವ್ಯ ಸ್ವಾಗತ ಸಿಗುವುದರಲ್ಲಿ ಹೆಚ್ಚುಗಾರಿಕೆ ಇಲ್ಲ. ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು ಎಂದು ಬಿಜೆಪಿ ಟೀಕಿಸಿದೆ.
ಕಾಂಗ್ರೆಸ್ ಪಕ್ಷ ನೈತಿಕವಾಗಿ ಅಧಃಪತನ ಕಂಡಿದೆ ಎಂಬುದನ್ನು ಸೂಚಿಸಲು ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಕೊಲೆ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದರೆ ಯುದ್ಧ ಗೆದ್ದು ಬಂದವರಂತೆ ಸ್ವಾಗತಿಸಲಾಗುತ್ತಿದೆ. ಕೊಲೆ ಆರೋಪಿಗಳಿಗೆ ಭವ್ಯ ಸ್ವಾಗತ ನೀಡುವುದನ್ನು ಕಾಂಗ್ರೆಸ್ ವರಿಷ್ಠರು ಬೆಂಬಲಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
Next Story





