`ಜಾತಿ ಗಣತಿ' ವಿಚಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…

ಹುಬ್ಬಳ್ಳಿ, ಆ. 22: `ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ(ಜಾತಿ ಗಣತಿ)ಸಮೀಕ್ಷಾ ವರದಿ ವಿಚಾರದ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಪರಿಶೀಲನೆ ನಡೆಸಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ಹುಬ್ಬಳ್ಳಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, `ಜಾತಿ ಗಣತಿ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಈ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರೂ ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು' ಎಂದು ಸಲಹೆ ನೀಡಿದರು.
`ಗುಂಡು ಹಾಕಿದರೂ ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆ ಮಾಡುತ್ತೇವೆ' ಎಂಬ ಬಿಜೆಪಿಯ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಯತ್ನಾಳ್ ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ಈ ಬಗ್ಗೆ ಅವರನ್ನೇ ಕೇಳಿ' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Next Story





