Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್‌...

ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್‌ ಫಾರಂ ವತಿಯಿಂದ ಕಲ್ಲಡ್ಕದಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ22 Aug 2021 6:12 PM IST
share
ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್‌ ಫಾರಂ ವತಿಯಿಂದ ಕಲ್ಲಡ್ಕದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಾಗೂ ಮರ್ಹೂಂ ರಫೀಕ್‌ ಅಮರ್‌ ಸ್ಮರಣಾರ್ಥ, ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್‌ ಫಾರಂ ಹಾಗೂ ಎ.ಜೆ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಕಲ್ಲಡ್ಕದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್ ಫಾರಂ ಕಲ್ಲಡ್ಕ ಅಧ್ಯಕ್ಷರಾದ ಹಮೀದ್‌ ಅಲಿ, ರಕ್ತದಾನದ ಮಹತ್ವಗಳನ್ನು ಜನರೆದುರು ಮುಂದಿಟ್ಟರು. ಪ್ರಾಸ್ತಾವಿವಾಗಿ ಮಾತನಾಡಿದ ಪಾಪ್ಯುಲರ್‌ ಫ್ರಂಟ್‌ ಕಲ್ಲಡ್ಕ ಡಿವಿಶನ್‌ ಅಧ್ಯಕ್ಷ ಅಬೂಬಕರ್‌ ಸಿದ್ದೀಕ್‌, "ನಮ್ಮನ್ನು ಅಗಲಿದ ನಮ್ಮ ಸ್ನೇಹಿತರಿಗೆ ನಾವೇನಾದರೂ ಮಾಡಬೇಕೆಂದಾದರೆ ರಕ್ತದಾನಕ್ಕಿಂತ ಉತ್ತಮವಾದುದು ಬೇರೆ ಇಲ್ಲ. ನಾವು ನಮ್ಮ ಸುತ್ತಲಿನ ವ್ಯಕ್ತಿಗಳೊಂದಿಗೆ ಸ್ನೇಹ, ಪ್ರೀತಿ ಬೆಳೆಸಬೇಕು. ನಮ್ಮ ಮಕ್ಕಳನ್ನು ಉತ್ತಮ ಸಂಸ್ಕಾರವಂತರಾಗಿ ಬೆಳೆಸಬೇಕು. ಇದುವೇ ನಾವು ಸಮಾಜಕ್ಕೆ ನೀಡುವ ಕೊಡುಗೆ" ಎಂದರು.

ಬೀಡಿ ಕಾರ್ಮಿಕರ ಕಲ್ಯಾಣ ಸಂಚಾರಿ ಮತ್ತು ಸ್ಥಿರ ಆಸ್ಪತ್ರೆಯ ವೈದ್ಯೆಯಾಗಿರುವ ಡಾ. ಆಯಿಶಾ ಮಾತನಾಡಿ ರಕ್ತದಾನ ಮಾಡಲಿಕ್ಕಿರುವ ಅರ್ಹತೆ ಮತ್ತು ರಕ್ತದಾನದಿಂದಾಗುವ ಪ್ರಯೋಜನಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೋವಿಡ್‌ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಜನರ ಯೋಗಕ್ಷೇಮ ನೋಡಿಕೊಂಡ ಆಶಾ ಕಾರ್ಯಕರ್ತೆಯರನ್ನು, ನೀರಪಾದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರನ್ನು ಸನ್ಮಾನಿಸಲಾಯಿತು. ಗೋಳ್ತಮಜಲು ಅಂಗನವಾಡಿಯಲ್ಲಿ ಮೂವತ್ತು ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಜಯಂತಿ ಟೀಚರ್, ಕಲ್ಲಡ್ಕ ಮತ್ತು ಆಸುಪಾಸಿನಲ್ಲಿ 40 ವರ್ಷಗಳ ಕಾಲ ಪತ್ರಿಕೆಗಳನ್ನು ಮಾರಾಟ ಮಾಡುತ್ತಿದ್ದ ಅಬ್ದುಲ್‌ ಖಾದರ್‌ ಕಲ್ಲಡ್ಕ, ಕಲ್ಲಡ್ಕ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಚೆರೆಮೋನು ಮುಕ್ರಿ, 50ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಹಕೀಮ್‌ ಕಲ್ಲಡ್ಕರವರನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್ ಫಾರಂ ಕಲ್ಲಡ್ಕ ಗೌರವಾಧ್ಯಕ್ಷರಾದ ಇಬ್ರಾಹೀಂ ಇದ್ದಿನಬ್ಬ ಕೆ.ಎಚ್‌, ಬಂಟ್ವಾಳದ ವಕೀಲರು ಮತ್ತು ನೋಟರಿಗಳಾದ ಹಬೀಬ್‌ ರಹ್ಮಾನ್‌, ಗೋಳ್ತಮಜಲು ಗ್ರಾಮ ಪಂಚಾಯತ್‌ ಸದಸ್ಯರಾದ ಹಾರಿಸ್‌ ಅಮರ್‌, ಇಕ್ಬಾಲ್‌ ಕೆ,ಸಿ ರೋಡ್‌, ಯೂಸುಫ್‌ ಹೈದರ್‌, ಸುಮಯ್ಯಾ ಸಿದ್ದೀಕ್‌, ಪಾಪ್ಯುಲರ್‌ ಫ್ರಂಟ್‌ ಬ್ಲಡ್‌ ಡೋನರ್ಸ್ ಫಾರಂ ಕಲ್ಲಡ್ಕ ಪ್ರಧಾನ ಕಾರ್ಯದರ್ಶಿ ಕೆ.ಕೆ ಸಯೀದ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ಒಟ್ಟು 109 ಯೂನಿಟ್‌ ಗಳಷ್ಟು ರಕ್ತ ಸಂಗ್ರಹವಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X