ದ.ಕ.ಜಿಲ್ಲೆ : ಕೋವಿಡ್‌ಗೆ 4 ಬಲಿ; 286 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಆ. 22: ದ.ಕ.ಜಿಲ್ಲೆಯಲ್ಲಿ ರವಿವಾರ ಕೋವಿಡ್‌ಗೆ 4 ಮಂದಿ ಬಲಿಯಾಗಿದ್ದರೆ, 286 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.3.45 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,535ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 1,07,957ಕ್ಕೇರಿದೆ. ಅಲ್ಲದೆ 418 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 1,03,385ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,037 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 14,58,667 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 13,50,710 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಈವರೆಗೆ ಮಾಸ್ಕ್ ನಿಯಮ ಉಲ್ಲಂಘಿಸಿದ 85,385 ಮಂದಿಯಿಂದ 1,03,92,420 ರೂ. ದಂಡವನ್ನು ವಸೂಲು ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





