ಪೋಲೀಸ್ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ ಪ್ರಕರಣ: ಆರೋಪಿಗಳಿಗೆ ಜಾಮೀನು
ಉಡುಪಿ, ಆ.22: ಕರ್ನಾಟಕ ರಾಜ್ಯ ಸಶಸ್ತ್ರ ಕಾನ್ಸ್‌ಸ್ಟೇಬಲ್ ಹುದ್ದೆಯ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ವಂಚನೆ ಎಸಗಿರುವ ಆರೋಪದಡಿ ಬಂಧಿಸಲಾಗಿದ್ದ ನಾಲ್ವರು ಆರೋಪಿಗಳಾದ ಹನಮಂತ ಮೇಸ್ತ್ರೀ, ಅಪ್ಪಯ್ಯ ನಾಯಕ್, ಇಸ್ಮಾಯಿಲ್ ನದಾಫ್ ಮತ್ತು ಹೊಳೆಪ್ಪ ಭಾಗೆವಾಡಿ ಎಂಬವರಿಗೆ ಉಡುಪಿಯ ಪ್ರಥಮ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಗುರುವಾರ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳ ಪರ ಜಾಮೀನು ಅರ್ಜಿಯನ್ನು ಉಡುಪಿಯ ಯುವ ನ್ಯಾಯವಾದಿಗಳಾದ ಅಸದುಲ್ಲಾ ಕಟಪಾಡಿ ಮತ್ತು ಪ್ರವೀಣ್ ಪೂಜಾರಿ ಸಲ್ಲಿಸಿದ್ದರು. ಜಾಮೀನು ಅರ್ಜಿ ಪುರಸ್ಕರಿಸಿದ ಉಡುಪಿ ಪ್ರಥಮ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.
Next Story





